ಜಿಲ್ಲೆ

ವಿದ್ಯುತ್​ ವ್ಯತ್ಯಯ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ
ತಬಕದಹೊನ್ನಳ್ಳಿ ವಿದ್ಯುತ್​ ವಿತರಣಾ ಕೇಂದ್ರದಲ್ಲಿ ಜೂ. 10ರಂದು ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮದಿಂದ ತುರ್ತು ಕಾಮಗಾರಿ ಕೈಗೊಳ್ಳುವುದರಿಂದ ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ತಬಕದಹೊನ್ನಳ್ಳಿ, ಬಿರವಳ್ಳಿ, ಬೆಂಡಲಗಟ್ಟಿ, ಆಸ್ತಕಟ್ಟಿ, ನೆಲ್ಲಿಹರವಿ, ಮಲಕನಕೊಪ್ಪ, ಹುಣಸಿಕಟ್ಟಿ, ಬಿದರಗಡ್ಡಿ, ಗಂಜಿಗಟ್ಟಿ, ಸೊಲಾರಕೊಪ್ಪ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.