ಮಂಡ್ಯ: ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ನ.13ರಂದು ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಚಿಕ್ಕಮಂಡ್ಯ ವಿದ್ಯುತ್ ವಿತರಣಾ ಕೇಂದ್ರದ ನಗರ ಪ್ರದೇಶಗಳಾದ ಶಂಕರಪುರ, ಜೈನರ ಬೀದಿ, ಬೀಡಿ ಕಾಲನಿ, ಜಬರ್ ವೃತ್ತ, ವಿನಾಯಕ ಬಡಾವಣೆ ಹಾಗೂ ಗ್ರಾಮಾಂತರ ಪ್ರದೇಶಗಳಾದ ಗೋಪಾಲಪುರ, ಚಿಕ್ಕಮಂಡ್ಯ, ಸಾತನೂರು, ಕೊಮ್ಮೇರಹಳ್ಳಿ, ಹುಲಿವಾನ, ಕೆ. ಗೌಡಗೆರೆ, ಎಚ್.ಮಲ್ಲಿಗೆರೆ, ಎಸ್.ಐ.ಕೋಡಿಹಳ್ಳಿ, ಎಚ್.ಕೋಡಿಹಳ್ಳಿ, ಸಂಪಹಳ್ಳಿ, ಗೊರವಾಲೆ, ಬಿ.ಹೊಸಹಳ್ಳಿ, ಬೀರಗೌಡನಹಳ್ಳಿ ಹಾಗೂ ಸುತ್ತ ಮುತ್ತಲಿನ ಪ್ರದೇಶದಲ್ಲಿ ಬೆಳಗ್ಗೆ 9ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.