ಜಿಲ್ಲೆ

ತ್ರೈಮಾಸಿಕ ಕಾರ್ಯನಿರ್ವಹಣೆ ಕಾಮಗಾರಿ: ಜೂ.12ರಂದು ತೂಬಿನಕೆರೆ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಮಂಡ್ಯ: ತೂಬಿನಕೆರೆ ವಿದ್ಯುತ್ ವಿತರಣಾ ಕೇಂದ್ರದ 66/11 ಫೀಡರ್‌ಗಳ ಮಾರ್ಗದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಜೂ.12ರಂದು ತಾಲೂಕಿನ ವಿವಿಧೆಡೆ ವಿದ್ಯುತ್‌ನಲ್ಲಿ ಅಡಚಣೆ ಉಂಟಾಗಲಿದೆ.

ತೂಬಿನಕೆರೆ, ತೂಬಿನಕೆರೆ ಕೈಗಾರಿಕೆ ಬಡಾವಣೆ, ಉರಮಾರಕಸಲಗೆರೆ, ಯಲಿಯೂರು, ಕಾಳೇನಹಳ್ಳಿ, ಎಲೆಚಾಕನಹಳ್ಳಿ, ರಾಗಿಮುದ್ದನಹಳ್ಳಿ, ಸುಂಡಹಳಿ, ಪೀ.ಹಳ್ಳಿ , ಕೊಡಿಯಾಲ, ಆಲಗೂಡು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಗ್ಗೆ 9ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.