ಜಿಲ್ಲೆ

ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ರವಿಕುಮಾರ್ ಪಿ. ಕೆ

ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಸೆಸ್ಕ್ ವಿಭಾಗದ ವ್ಯಾಪ್ತಿಯ ಬೆಟ್ಟದಪುರ ಉಪವಿಭಾಗದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣೆ ಇರುವುದರಿಂದ ಫೆ.18ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬೆಟ್ಟದಪುರ, ಹರದೂರು, ಚಿಕ್ಕನೇರಳೆ, ಭುವನಹಳ್ಳಿ, ಕೋಮಲಾಪುರ, ಎಚ್.ಎಚ್ ಬಾಗಿಲು, ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಇರುವುದಿಲ್ಲ. ಆದ್ದರಿಂದ ಗ್ರಾಹಕರು ಸಹಕರಿಸಬೇಕು ಎಂದು ಸೆಸ್ಕ್ ಎಇಇ ಲಕ್ಷ್ಮೀಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.