ಗಂಧನಹಳ್ಳಿ: ಸಾಲಿಗ್ರಾಮ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಮಿರ್ಲೆ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಫೀಡರ್‌ಗಳ ನಾಲ್ಕನೇ ತ್ರೈಮಾಸಿಕ ತುರ್ತು ನಿರ್ವಹಣಾ ಕೆಲಸದ ನಿಮಿತ್ತ ಫೆ.15 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಅಂಕನಹಳ್ಳಿ, ಗಂಧನಹಳ್ಳಿ, ನರಚನಹಳ್ಳಿ ಹಾಗೂ ಮಿರ್ಲೆ ಪಂಚಾಯಿತಿ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಸಹಕರಿಸುವಂತೆ ಸಾಲಿಗ್ರಾಮ ಉಪ ವಿಭಾಗದ ಸೆಸ್ಕ್ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಧುಸೂದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.