ಬೆಳಗಾವಿ: ತುರ್ತು ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮೇ 23ರಂದು ಬೆಳಗ್ಗೆ 11ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಮಚ್ಛೆ ಉಪಕೇಂದ್ರದಿಂದ ಸರಬರಾಜು ಆಗುವ ಬೆಳಗಾವಿ ತಾಲೂಕಿನ ಬಳಗಾಮಟ್ಟಿ, ಕುಟ್ಟಲವಾಡಿ, ಬಾಮನವಾಡಿ, ನಾವಗೆ, ಜಾನೇವಾಡಿ, ಬಾದರವಾಡಿ, ರಣಕುಂಡೆ, ಕರ್ಲೇ, ಕಿನಯೇ, ತೀರ್ಥಕುಂಡೆ, ಕವಲಪುರವಾಡಾ ಗ್ರಾಮಗಳಿಗೆ ಹಾಗೂ ಖಾನಾಪೂರ ತಾಲೂಕಿನ ಉಚವಡಾ, ಕುಸಮಳಿ, ಬೈಲೂರ, ಮೊರಬ, ಜಾಂಬೋಟಿ, ಓಲಮನಿ, ವಡಗಾಂವ, ದಾರೋಳಿ, ಚಾಪೋಲಿ, ಕಾಪೋಲಿ, ಮುಡವಿ, ಹಬ್ಬಾನಟ್ಟಿ, ದೇವಾಚಿಹಟ್ಟಿ, ತೋರಾಳಿ, ಗೋಲ್ಯಾಳಿ, ಬೆಟಗೇರಿ, ತಳೇವಾಡಿ, ಅಮಟೆ, ಕಾಲಮನಿ, ಚಿಕಲೆ, ಕಣಕುಂಬಿ, ಗವಸೆ, ಅಮಗಾಂವ, ಬೇಟ್ನೆ, ಪಾರವಾಡ, ಚಿಗುಳೆ, ಮಾನ, ಸಡಾ, ಚೋರ್ಲಾ, ಹಳೆ ಹಾಗೂ ಹೊಸ ಹುಳಂದ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಗ್ರಾಮೀಣ ವಿಭಾಗದ ಅಭಿಯಂತರರು ತಿಳಿಸಿದ್ದಾರೆ.
--