ಮುಂಡರಗಿ: ವಿದ್ಯುತ್ ಪರಿವರ್ತಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪಟ್ಟಣದ ಹೆಸ್ಕಾಂ ಪವರ್‌ಮನ್ ಮಂಜುನಾಥ ಹನುಮಂತಪ್ಪ ಡೊಳ್ಳಿನ (34) ವಿದ್ಯುತ್ ತಗುಲಿ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ.
ಮಂಜುನಾಥ ಹುಡ್ಕೊ ಕಾಲನಿ ಸಮೀಪದಲ್ಲಿರುವ ಲೇಔಟ್‌ನಲ್ಲಿ ವಿದ್ಯುತ್ ಪರಿವರ್ತಕದಲ್ಲಿ (ಟಿಸಿ) ಕೆಲಸ ಮಾಡುತ್ತಿರುವಾಗ ವಿದ್ಯುತ್ ತಗುಲಿದೆ. ತಕ್ಷಣ ಆತನನ್ನು ಸ್ಥಳೀಯ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.