ಕುರುಗೋಡು ಸಮೀಪದ ಸೋಮಲಾಪುರ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನ ಆಚರಿಸಲಾಯಿತು. ಪ್ರಮುಖರಾದ ಶಿವಕುಮಾರ್, ಬಸವರಾಜ್, ಆಶಾ ಕಾರ್ಯಕರ್ತೆಯರು ಇದ್ದರು. 
ಜಿಲ್ಲೆ

ನಿತ್ಯ ವ್ಯಾಯಾಮ, ಯೋಗಾಸನ ರೂಢಿಸಿಕೊಳ್ಳಿ

Gangavati - Desk - Veeresh S Ullagaddi

ಕುರುಗೋಡು: ಇತ್ತೀಚಿನ ದಿನಗಳಲ್ಲಿ ಮಾನಸಿಕ ಖಿನ್ನತೆಗೆ ಹದಿಹರೆಯದ ಯುವಕರು ಬಲಿಯಾಗುತ್ತಿದ್ದಾರೆ ಎಂದು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಲಕ್ಷ್ಮಣ್ ನಾಯಕ್ ಹೇಳಿದರು.


ಸಮೀಪದ ಸೋಮಲಾಪುರ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಂಗಳವಾರ ಮಾತನಾಡಿದರು. ಅಶಿಸ್ತಿನ ಜೀವನಶೈಲಿಯಿಂದ ಆತ್ಮಹತ್ಯೆಗಳ ಪ್ರಕರಣ ಹೆಚ್ಚಾಗಿ ಕಂಡು ಬರುತ್ತಿವೆ. ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ಪ್ರತಿಯೊಬ್ಬರು ಯೋಗ ಧ್ಯಾನ ಪ್ರಾಣಾಯಾಮ ಮಾಡಬೇಕು ಎಂದರು.


ಕ್ಷೇತ್ರ ಶಿಕ್ಷಣಾಧಿಕಾರಿ ರಾಘವಶೆಟ್ಟಿ ಮಾತನಾಡಿದರು. ಪ್ರಮುಖರಾದ ಬಸವರಾಜ್, ಶಿವಕುಮಾರ್, ಆಶಾ ಕಾರ್ಯಕರ್ತೆಯರು ಇದ್ದರು.