ಚಿಕ್ಕಮಗಳೂರಿನ ಕೆಸ್ವಾನ್ ಸಭಾಂಗಣದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಡಿಸಿ ಮೀನಾ ನಾಗರಾಜ್, ಎಸ್‌ಪಿ ವಿಕ್ರಮ ಅಮಟೆ, ಜಿಪಂ ಸಿಇಒ ಕೀರ್ತನಾ ಉಪಸ್ಥಿತರಿದ್ದರು. 
ಜಿಲ್ಲೆ

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಸ್ವಾವಲಂಭಿ ಬದುಕಿಗೆ ಸಹಕಾರಿ

ಚಿಕ್ಕಮಗಳೂರು: ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಸಾಲ ಸೌಲಭ್ಯವನ್ನು ಒದಗಿಸಿ ಅವರ ಸ್ವಾವಲಂಬಿ ಬದುಕಿಗೆ ಸಹಕರಿಸಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಕೆಸ್ವಾನ್‌ನಲ್ಲಿ ಶುಕ್ರವಾರ ನಡೆದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯು ಮಹತ್ವ ಪೂರ್ಣ ಯೋಜನೆಯಾಗಿದೆ. ಕುಶಲ ಕರ್ಮಿಗಳನ್ನು ಬಲಪಡಿಸುವ ಹಾಗೂ ಅವರ ಕೌಶಲ್ಯವನ್ನು ಹೆಚ್ಚಿಸುವ ದೃಷ್ಟಿಯಿಂದ ತರಬೇತಿ ನೀಡಲಾಗುತ್ತಿದೆ. ತರಬೇತಿ ಸಮಯದಲ್ಲಿ ಅಭ್ಯರ್ಥಿಗಳಿಗೆ ಊಟ, ವಸತಿ ಹಾಗೂ ಶಿಷ್ಯ ವೇತನ ನೀಡಿ ಅವರ ಏಳಿಗೆಗೆ ಸಹಕರಿಸುವುದು ಸರ್ಕಾರದ ಉz್ದೆÃಶವಾಗಿದೆ ಎಂದರು.
ಯಾವುದೇ ಕುಶಲಕರ್ಮದಲ್ಲಿ ಕೌಶಲ್ಯವುಳ್ಳವರನ್ನು ಗುರುತಿಸಿ ಅವರಿಗೆ ಉತ್ತಮ ಮಟ್ಟದ ತರಬೇತಿಯನ್ನು ನೀಡಿ ಕೇಂದ್ರ ಸರ್ಕಾರದ ನಿರ್ದೇಶನದಂತೆ ಬ್ಯಾಂಕ್‌ಗಳಿAದ ಸಾಲ ಒದಗಿಸಿ ಅವರ ಸ್ವಾವಲಂಬಿ ಬದುಕಿಗೆ ಸಹಕರಿಸಬೇಕು. ಈಗಾಗಲೇ ಈ ಯೋಜನೆಯಡಿ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳು ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ್ದರೆ ಶೀಘ್ರವಾಗಿ ಪರಿಶೀಲಿಸಿ ಸಾಲ ನೀಡಬೇಕು. ಯೋಜನೆಯ ಲಾಭವನ್ನು ಪ್ರತಿಯೊಬ್ಬರು ಪಡೆದುಕೊಳ್ಳುವಂತೆ ಕ್ರಮವಹಿಸಿ ಎಂದರು.
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ, ಜಿಲ್ಲೆಯಲ್ಲಿ ತರಬೇತಿ ಕೇಂದ್ರಗಳನ್ನು ತೆರೆದು ಬಡಗಿ, ದೋಣಿ ತಯಾರಕರು, ಶಸ್ತç ತಯಾರಕರು, ಕುಂಬಾರ ವೃತ್ತಿ ಮಾಡುವವರು ಹಾಗೂ ವಿವಿಧ ಕಸುಬುಗಳಲ್ಲಿ ಕೌಶಲ್ಯವಿರುವ ಅರ್ಹ ಅಭ್ಯರ್ಥಿಗಳಿಗೆ ಊಟ ವಸತಿ ಹಾಗೂ ೫೦೦ ರೂ.ಗಳ ಶಿಷ್ಯ ವೇತನದೊಂದಿಗೆ ತರಬೇತಿ ನೀಡಲಾಗುತ್ತಿದೆ. ತರಬೇತಿಯ ನಂತರ ಡಿಜಿಟಲ್ ಗುರುತಿನ ಚೀಟಿಯನ್ನು ನೀಡಲಾಗುತ್ತದೆ. ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ವಿವರವನ್ನು ಪರಿಶೀಲಿಸಿ ಕೊಡಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಸಿದ್ದರಾಜು ಸಭೆಗೆ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಒಟ್ಟು ೪೧,೯೧೭ ಅರ್ಜಿಗಳು ಸಲ್ಲಿಕೆಯಾಗಿವೆ. ಇವುಗಳಲ್ಲಿ ಗ್ರಾಮ ಪಂಚಾಯಿತಿಗಳಿAದ ೩೨,೬೪೦ ಹಾಗೂ ನಗರ, ಪಟ್ಟಣ ಪಂಚಾಯಿತಿಯಿAದ ೯,೨೭೭ ಅರ್ಜಿಗಳು ಸಲ್ಲಿಕೆಯಾಗಿವೆ. ಇವುಗಳನ್ನು ಪರಿಶೀಲಿಸಿ ೧,೬೩೯ ಅರ್ಜಿಗಳನ್ನು ಮೌಲ್ಯಮಾಪನ ಮಾಡಲಾಗಿದೆ ಹಾಗೂ ಒಟ್ಟು ೧,೪೨೬ ಅಭ್ಯರ್ಥಿಗಳು ತರಬೇತಿಗೆ ಆಯ್ಕೆಯಾಗಿದ್ದಾರೆ. ಈಗಾಗಲೇ ೭೭೯ ಅಭ್ಯರ್ಥಿಗಳ ತರಬೇತಿ ಪೂರ್ಣವಾಗಿದೆ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ಹಾಗೂ ಡಿಜಿಟಲ್ ಗುರುತಿನ ಚೀಟಿ ನೀಡಿ ಉಪಕರಣಗಳ ಕಿಟ್‌ಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಎಚ್.ಎಸ್.ಕೀರ್ತನಾ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಪ್ರಶಾಂತ್, ಕೈಗಾರಿಕೆ ಇಲಾಖೆಯ ಉಪನಿರ್ದೇಶಕ ರವಿಪ್ರಸಾದ್, ಲೀಡ್ ಬ್ಯಾಂಕ್ ಮ್ಯಾನೇಜರ್ ಸುರೇಶ್ ಮತ್ತಿತರರಿದ್ದರು.