ಜಿಲ್ಲೆ

ಪ್ರಜ್ವಲ್‌ಗೂ ಜೆಡಿಎಸ್‌ಗೂ ಸಂಬಂಧ ಇಲ್ಲ: ಜಿ.ಟಿ.ದೇವೇಗೌಡ

ಮಂಜುನಾಥ ತಿಮ್ಮಯ್ಯ

ಮೈಸೂರು: ಪ್ರಜ್ವಲ್‌ಗೂ, ಜೆಡಿಎಸ್ ಪಕ್ಷಕ್ಕೂ ಸಂಬಂಧ ಇಲ್ಲ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದರು.


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಅವರನ್ನು ಈಗಾಗಲೇ ಪಕ್ಷದಿಂದ ಉಚ್ಚಾಟಿಸಿದ್ದು, ಪ್ರಜ್ವಲ್‌ಗೂ ನಮಗೂ ಸಂಬಂಧ ಇಲ್ಲ. ನನಗೆ ಸಂಬಂಧವಿಲ್ಲದ ವಿಚಾರದ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಹೇಳಿದರು.