ಮಡಿಕೇರಿ: ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್‌ನ ೧೯ನೇ ವರ್ಷದ ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ರೈ ಮತ್ತು ಕಾರ್ಯದರ್ಶಿಯಾಗಿ ರತ್ನಾಕರ್ ರೈ ಆಯ್ಕೆಯಾಗಿದ್ದಾರೆ.
ಆಡಳಿತ ಮಂಡಳಿಯ ಪದಗ್ರಹಣ ಕಾರ್ಯಕ್ರಮ ಜು.೪ ರಂದು ಸಂಜೆ ೬.೩೦ ಗಂಟೆಗೆ ಮಡಿಕೇರಿ ಹೊರವಲಯದಲ್ಲಿನ ಆಹನ್ ಹಿಲ್ ಕಾಟೇಜ್ನಲ್ಲಿ ನಡೆಯಲಿದೆ. ರೋಟರಿ ಜಿಲ್ಲೆ ೩೧೮೧ ನ ಮುಂದಿನ ಸಾಲಿನ ನಿಯೋಜಿತ ಗವರ್ನರ್ ವಿಕ್ರಂದತ್ತ ಪದಗ್ರಹಣ ನೆರವೇರಿಸಲಿದ್ದಾರೆ.
ಸಹಾಯಕ ಗವರ್ನರ್ ದೇವಣಿರ ತಿಲಕ್, ವಲಯ ಸೇನಾನಿ ಎಸ್.ಎಸ್.ಸಂಪತ್ ಕುಮಾರ್, ನಿರ್ಗಮಿತ ಅಧ್ಯಕ್ಷ ಪ್ರಸಾದ್ ಗೌಡ ಪಾಲ್ಗೊಳ್ಳಲಿದ್ದಾರೆ ಎಂದು ಮಿಸ್ಟಿ ಹಿಲ್ಸ್ ಪ್ರಕಟಣೆ ತಿಳಿಸಿದೆ.