ಜಿಲ್ಲೆ

ಪ್ರಣವಾನಂದ ಸ್ವಾಮೀಜಿ ಪಾದಯಾತ್ರೆ

Uttara Kannada - Subash Hegde

ಕಾರವಾರ: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾದವರ ಹುಡುಕಾಟ ಕಾರ್ಯವನ್ನು ಯಾವುದೇ ಕಾರಣಕ್ಕೂ ಕೈಬಿಡಬಾರದು ಎಂದು ಒತ್ತಾಯಿಸಿ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ಅಂಕೋಲಾದಿಂದ ಶಿರೂರುವರೆಗೆ ಭಾನುವಾರ ಪಾದಯಾತ್ರೆ ನಡೆಸಿದರು.
ಮೃತರ ಆತ್ಮಕ್ಕೆ ಶಾಂತಿ ಕೋರಿ ಅಂಕೋಲಾದಲ್ಲಿ ಶ್ರದ್ಧಾಂಜಲಿ ಸಭೆ ನಡೆಸಲಾಯಿತು. ನಂತರ ಸ್ವಾಮಿಗಳು, ಪಾದಯಾತ್ರೆಯಲ್ಲಿ ಶಿರೂರಿಗೆ ತೆರಳಿ ಅಲ್ಲಿರುವ ಜಗನ್ನಾಥ ನಾಯ್ಕ ಕುಟುಂಬದ ಸದಸ್ಯರನ್ನು ಭೇಟಿಯಾಗಿ ಅವರಿಗೆ ಆಹಾರ ಧಾನ್ಯಗಳನ್ನು ಮುಟ್ಟಿಸಿದರು.
ಐಆರ್‌ಬಿ ಕಂಪನಿಯಿಂದ ಮೃತರ ಕುಟುಂಬಗಳಿಗೆ ಪರಿಹಾರ ಕೊಡಬೇಕು. ಈ ನಿಟ್ಟಿನಲ್ಲಿ ಜನಪ್ರತಿನಿಽಗಳು ಹೋರಾಟ ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕ ಸತೀಶ ಸೈಲ್ ಅವರನ್ನು ಭೇಟಿಯಾಗಿ ಒತ್ತಾಯಿಸಿದರು.