ಶ್ರೀನಿವಾಸಪ್ರಸಾದ್ ಅವರ ನಿಧನ ರಾಜಕೀಯ ಬಂಧುಗಳು ಮತ್ತು ಅವರ ಬೆಂಬಲಿಗರನ್ನು ಶೋಕದಲ್ಲಿ ಮುಳುಗಿಸಿದೆ.
ಅವರ ಪಾರ್ಥಿವ ಶರೀರವನ್ನು ಮಣಿಪಾಲ ಆಸ್ಪತ್ರೆಯಿಂದ ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ಅವರ ನಿವಾಸಕ್ಕೆ ತರಲಾಯಿತು. ಅವರ ಕುಟುಂಬ ಸದಸ್ಯರು, ರಾಜಕೀಯ ಬಂಧುಗಳು ಮತ್ತು ಹಿತೈಷಿಗಳು ಅಂತಿಮ ನಮನ ಸಲ್ಲಿಸಿದರು.
ಬಳಿಕ ಅಶೋಕ್‌ಪುರಂನ ಎನ್‌ಟಿಎಂ ಶಾಲಾ ಆವರಣದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಅಭಿಮಾನಿಗಳು ಹಾಗೂ ಗಣ್ಯರು ಪ್ರಸಾದ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.