ಲಕ್ಷ್ಮೇಶ್ವರ: ತಾಲೂಕಿನ ಮುಕ್ತಿಮಂದಿರ ಧರ್ಮಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ರಂಭಾಪುರಿ ಲಿಂ. ಜಗದ್ಗುರು ವೀರಗಂಗಾಧರ ಪ್ರಸಾದ ನಿಲಯದ ಉದ್ಘಾಟನೆ ಸಮಾರಂಭ ಆ. 2ರಂದು ಬೆಳಗ್ಗೆ 11ಗಂಟೆಗೆ ಜರುಗಲಿದೆ ಎಂದು ಕ್ಷೇತ್ರದ ಪಟ್ಟಾಧ್ಯಕ್ಷರಾದ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಮುಕ್ತಿಮಂದಿರದಲ್ಲಿ ಈಗಾಗಲೇ ತ್ರಿಕೋಟಿ ಶಿವಲಿಂಗ ಸ್ಥಾಪನಾ ಕಾರ್ಯ ಭರದಿಂದ ಸಾಗಿದ್ದು, ಕ್ಷೇತ್ರಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಹೋಗುತ್ತಿದ್ದಾರೆ. ಬರುವ ಭಕ್ತರಿಗಾಗಿ ಪ್ರಸಾದ ನಿಲಯ ಆರಂಭಿಸಲಾಗಿದೆ. ಇನ್ನು ಮುಂದೆ ಪ್ರತಿದಿನ ಕ್ಷೇತ್ರದಲ್ಲಿ ಅನ್ನಪ್ರಸಾದದ ವಿತರಣೆ ನಡೆಯಲಿದೆ ಎಂದು ಅವರು ತಿಳಿಸಿದರು.
ಸಮಾರಂಭದ ನೇತೃತ್ವವನ್ನು ನೊಣವಿನಕೆರೆ ಕಾಡಸಿದ್ಧೇಶ್ವರಮಠದ ಡಾ.ಕರಿವೃಷಭ ದೇಶೀಕೇಂದ್ರ ಶಿವಯೋಗಿ ಸ್ವಾಮೀಜಿ ವಹಿಸಿಕೊಳ್ಳುವರು. ಎಮ್ಮಿಗನೂರಿನ ವಾಮದೇವ ಮಹಾಂತ ಶಿವಾಚಾರ್ಯ ಸ್ವಾಮೀಜಿ, ಕಲಾದಗಿ ಪಂಚಗೃಹ ಹಿರೇಮಠದ ಗಂಗಾಧರ ಶಿವಾಚಾರ್ಯ ಸ್ವಾಮೀಜಿ ಸಮ್ಮುಖದಲ್ಲಿ ಪ್ರಸಾದ ನಿಲಯದ ಉದ್ಘಾಟನೆ ನಡೆಯಲಿದೆ. ರಾಜ್ಯ ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಪ್ರಸಾದ ನಿಲಯ ಉದ್ಘಾಟಿಸುವರು. ಖ್ಯಾತ ವೈದ್ಯ ಡಾ. ಸುಮನ್ ಸೇರಿದಂತೆ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಪೋಟೊ: 31-ಎಲ್‌ಎಕ್ಷ್‌ಆರ್-1
ಲಕ್ಷ್ಮೇಶ್ವರ ತಾಲೂಕಿನ ಮುಕ್ತಿಮಂದಿರ ಧರ್ಮಕ್ಷೇತ್ರದಲ್ಲಿ ನಿರ್ಮಾಣಗೊಂಡಿರುವ ಶ್ರೀರಂಭಾಪುರಿ ಲಿಂ.ಜಗದ್ಗುರು ವೀರಗಂಗಾಧರ ಪ್ರಸಾದ ನಿಲಯ.