ಮೈಸೂರು: ಲೋಕಸಭಾ ಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿ ಏರ್ಪಟ್ಟ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್ ಸಿಂಹ ಸೋಮವಾರ ನಗರದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಬಳಿ ಮಂಡಿಯೂರಿ ನಮಸ್ಕರಿ ಆಶೀರ್ವಾದ ಪಡೆದರು.
ಪ್ರತಾಪ್ ಸಿಂಹ ಮಂಡಿಯೂರಿ ನಮಸ್ಕರಿಸುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಎಚ್.ಡಿ. ದೇವೇಗೌಡರು ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭ ಸಂಸದ ಪ್ರತಾಪ್ ಸಿಂಹ ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಕಳೆದ ಎರಡು ಬಾರಿ ಪ್ರತಾಪ್ ಸಿಂಹ ಸಂಸದರಾಗಿ ಆಯ್ಕೆಯಾಗುವಲ್ಲಿ ಜೆಡಿಎಸ್ ಕಾರ್ಯಕರ್ತರ ಕೊಡುಗೆಯೂ ಇದೆ. ಆದರೆ, ಇದೀಗ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಪ್ರತಾಪ್ ಸಿಂಹಗೆ ಮತ್ತಷ್ಟು ಅನುಕೂಲವಾಗಲಿದೆ. ಭೇಟಿ ಸಂದರ್ಭ ಶಾಸಕ ಜಿ.ಟಿ. ದೇವೇಗೌಡ ಇದ್ದರು.