ಜಿಲ್ಲೆ

ಸ್ವಪಕ್ಷದ ವಿರುದ್ಧವೇ ಬೇಸರ ಹೊರ ಹಾಕಿದ ಪ್ರತಾಪ್ ಸಿಂಹ!


ಮೈಸೂರು:
‘ಬುರ್ಖಾ ಸ್ಟೂಡೆಂಟ್ ಆಲಿಯಾ ಅಸ್ಸಾದಿಯಿಂದ ಗೇಲಿಗೆ ಒಳಗಾಗುವ ಪರಿಸ್ಥಿತಿ ಹಿಂದುತ್ವವಾದಿಯಾಗಿರುವ ರಘುಪತಿ ಭಟ್ ಅವರಿಗೆ ಬಂದಿರುವುದು ದುರದೃಷ್ಟಕರ’ ಎಂದು ಸಂಸದ ಪ್ರತಾಪ್ ಸಿಂಹ ಜಾಲತಾಣಗಳಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ರಘುಪತಿ ಭಟ್ ಅವರಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷದ ವಿರುದ್ಧವೇ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ.

ಉಡುಪಿಯ ಶಿಕ್ಷಣ ಸಂಸ್ಥೆಯೊಂದರಲ್ಲಿ ಸಮವಸ್ತ್ರ ಸಂಹಿತೆಯನ್ನು ಮುರಿದು ಬುರ್ಖಾ ಧರಿಸಿ ತರಗತಿಗೆ ಬಂದ ಜಿಹಾದಿ ಮನಸ್ಥಿತಿಯ ವಿರುದ್ಧ ಹೋರಾಡಿದ ರಘುಪತಿ ಭಟ್ಟರಿಗೆ ವಿಧಾನಸಭಾ ಟಿಕೆಟ್ಟೂ ಸಿಗಲಿಲ್ಲ, ಎಂಎಲ್‌ಸಿ ಟಿಕೆಟ್ಟನ್ನೂ ಕೊಡಲಿಲ್ಲ. ಸಾಲದೆಂಬಂತೆ ಪಕ್ಷದಿಂದಲೂ ಉಚ್ಚಾಟನೆಗೆ ಒಳಗಾಗಬೇಕಾಯಿತು ಎಂದು ಬರೆದುಕೊಂಡಿದ್ದಾರೆ.

ಈ ಮೂಲಕ ಬುರ್ಖಾ ಸ್ಟೂಡೆಂಟ್ ಆಲಿಯಾ ಅಸ್ಸಾದಿಯಿಂದ ಗೇಲಿಗೆ ಒಳಗಾಗುವ ಪರಿಸ್ಥಿತಿ ಹಿಂದುತ್ವವಾದಿಗಳಿಗೆ ಬಂದಿರುವುದು ದುರದೃಷ್ಟಕರ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ತಮಗೆ ಟಿಕೆಟ್ ಸಿಗದೆ ನಿರಾಶೆಗೊಳಗಾಗಿದ್ದ ಸಂಸದ ಪ್ರತಾಪ್ ಸಿಂಹ ಇದೀಗ ಮಾಡಿರುವ ಈ ಪೋಸ್ಟ್ ಅಚ್ಚರಿ ಮೂಡಿಸಿದೆ. ಟಿಕೆಟ್ ಸಿಗದಿದ್ದಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ರಘುಪತಿ ಭಟ್ ಅವರ ಪರವಾಗಿ ಪ್ರತಾಪ್ ಸಿಂಹ ಪೋಸ್ಟ್ ಮಾಡಿದ್ದಾರೆ.