ವಿಟ್ಲ: ಸರಕಾರಿ ಪ್ರೌಢಶಾಲೆ ಆರ್.ಎಂ.ಎಸ್.ಎ ನಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಸಮೂಹ ಸಂಪನ್ಮೂಲ ಕೇಂದ್ರ ವಿಟ್ಲ ನಡೆದ ೨೦೨೩-೨೪ನೇ ಸಾಲಿನ ವಿಟ್ಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳದ ಶಿಕ್ಷಣ ಸಂಯೋಜಕಿ ಸುಧಾ ಉದ್ಘಾಟಿಸಿದರು.
ವಿಟ್ಲ ಪಟ್ಟಣ ಪಂಚಾಯಿತಿ ಸದಸ್ಯ ರವಿಪ್ರಕಾಶ್ ವಿಟ್ಲ ಚೆಂಡೆಬಾರಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿ ಬಿಂದು, ಪ್ರಾಥಮಿಕ ವಿಭಾಗದ ಎಸ್.ಡಿ.ಎಂ.ಸಿ ಅಧ್ಯಕ್ಷ ರವಿಶಂಕರ್ ಸಿ, ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ಪ್ರತಿನಿಧಿಯಾದ ಚಂದಳಿಕೆ ಶಾಲಾ ಮುಖ್ಯಶಿಕ್ಷಕರು ವಿಶ್ವನಾಥ ಗೌಢ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ವಾರಿಜಕುಮಾರಿ, ಪ್ರೌಢಶಾಲಾ ಪ್ರಭಾರ ಮುಖ್ಯಶಿಕ್ಷಕಿ ಅನ್ನಪೂರ್ಣ, ಶಿಕ್ಷಕಿ ಶ್ರೀಮತಿ, ಪ್ರಾಥಮಿಕ ಹಾಗೂ ಪ್ರೌಢಶಾಲಾ ಎಸ್.ಡಿ.ಎಂ.ಸಿ ಸದಸ್ಯರು, ಶಿಕ್ಷಕರು ಉಪಸ್ಥಿತರಿದ್ದರು.