ದೊಡ್ಡಬಳ್ಳಾಪುರ ತಾಲೂಕು ಸಾಸಲು ಹೋಬಳಿಯ ಪುಟ್ಟಲಿಂಗಯ್ಯನ ಪಾಳ್ಯದ ಸರ್ಕಾರಿ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಬಿಇಒ ಸೈಯಿದಾ ಅನೀಸ್ ಉದ್ಘಾಟಿಸಿದರು.ಮುಖ್ಯ ಶಿಕ್ಷಕ ಎಂ.ರವಿಕುಮಾರ್ ಇದ್ದರು. 
ಜಿಲ್ಲೆ

ಸರ್ಕಾರಿ ಶಾಲೆಯಲ್ಲಿ ಪ್ರತಿಭಾ ಕಾರಂಜಿ

ಶಿವರಾಜ.ಎಂ

ಮಧುರೆ: ಪ್ರತಿಭಾ ಕಾರಂಜಿ ಕಾರ್ಯಕ್ರಮ ಮಕ್ಕಳಲ್ಲಿನ ಪ್ರತಿಭೆಗಳನ್ನು ಅನಾವರಣ ಮಾಡಲು ಉತ್ತಮ ವೇದಿಕೆಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೈಯಿದಾ ಅನೀಸ್ ಹೇಳಿದರು.
ದೊಡ್ಡಬಳ್ಳಾಪುರ ತಾಲೂಕು ಸಾಸಲು ಹೋಬಳಿಯ ಪುಟ್ಟಲಿಂಗಯ್ಯನ ಪಾಳ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸಾಸಲು ಕ್ಲಸ್ಟರ್ ಹಂತದ ಪ್ರತಿಭಾಕಾರಂಜಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಸಲು ಹೋಬಳಿಯ ಪುಟ್ಟಲಿಂಗಯ್ಯನ ಪಾಳ್ಯದಲ್ಲಿ ಈ ಕಾರ್ಯಕ್ರಮ ನಡೆಯುತ್ತಿರುವುದು ಸಂತಸ ತಂದಿದೆ. ಗ್ರಾಮೀಣ ಮಕ್ಕಳಲ್ಲಿ ಕ್ರೀಡೆ, ಕಲೆ, ಸಾಹಿತ್ಯ ಮತ್ತಿತರ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಇಂಥ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಗಾಯನ, ನೃತ್ಯ, ಏಕಪಾತ್ರಾಭಿನಯ, ನಾಟಕ, ಚರ್ಚಾ ಸ್ಪರ್ಧೆ, ಜಾನಪದ ನೃತ್ಯ, ಭಾವಗೀತೆ, ಪ್ರಬಂಧ ಸ್ಪರ್ಧೆ ಸೇರಿ ಹಲವು ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಗಳನ್ನು ಪ್ರದರ್ಶನ ಮಾಡಿದರು. ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ವಿತರಣೆ ಮಾಡಿದರು.