raichur 
ಜಿಲ್ಲೆ

ಆರ್ಯವೈಶ್ಯ ಸಮಾಜದಿಂದ ಪ್ರತಿಭಾ ಪುರಸ್ಕಾರ

Raichur - Reporter - Rachhai Swamy

ರಾಯಚೂರು ಆರ್ಯವೈಶ್ಯ ಅಧಿಕಾರಿಗಳ ಹಾಗೂ ವೃತ್ತಿನಿರತರ ಸಂಘದಿಂದ ಅ.17 ರಂದು ಆರ್ಯವೈಶ್ಯ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವನ್ನು ನಗರದ ಪಂ.ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಬೆಳಗ್ಗೆ 10.30ಕ್ಕೆ ಆಯೋಜಿಸಲಾಗಿದೆಂದು ಸಂಘದ ಅಧ್ಯಕ್ಷ ವೆಂಕಟೇಶ ಆಲೂರು ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮವನ್ನು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ನಗರ ಶಾಸಕ ಡಾ.ಶಿವರಾಜ ಪಾಟೀಲ್, ಕರ್ನಾಟಕ ಅವೋಪಗಳ ಒಕ್ಕೂಟದ ಅಧ್ಯಕ್ಷ ಎಸ್.ಎಲ್.ಕೋರ ಆಗಮಿಸಲಿದ್ದಾರೆ.

ಅತಿಥಿಗಳಾಗಿ ವಾಣಿಜ್ಯೋದ್ಯಮಿ ಮಂಚುಕೊಂಡ ನರಸಿಂಹಯ್ಯ, ಶ್ರೀನಗರೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಸಾವಿತ್ರಿ ಪುರುಷೋತ್ತಮ, ಆರ್ಯವೈಶ್ಯ ಗೀತಾಮಂದಿರದ ಅಧ್ಯಕ್ಷ ಲಕ್ಷ್ಮೀಪತಿ ಗಾಣಧಾಳ, ವಾಸವಿ ಕ್ಲಬ್ ಇಂಟರ್ ನ್ಯಾಷನಲ್ ನಿರ್ದೇಶಕ ಜಗದೀಶ ಗುಪ್ತಾ, ಗಾರಲದಿನ್ನಿ ತಿಪ್ಪಯ್ಯ ಶೆಟ್ಟಿ, ಆರ್ಯವೈಶ್ಯ ಮಹಾಸಭಾ ಜಿಲ್ಲಾಧ್ಯಕ್ಷ ಭೀಮಾಶಂಕರ ಸೇರಿ ಅನೇಕರು ಆಗಮಿಸಲಿದ್ದಾರೆ.

ಸಂಘದ ಕಾರ್ಯದರ್ಶಿ ಪಂಡ್ಯಾಲ ಕಿಶೋರ ಮಾತನಾಡಿ, ಪ್ರತಿಭಾ ಪುರಸ್ಕಾರದೊಂದಿಗೆ ಐದು ಜನ ವಿದ್ಯಾರ್ಥಿಗಳಿಗೆ ಸ್ವರ್ಣ, 26 ವಿದ್ಯಾರ್ಥಿಗಳಿಗೆ ರಜತ, 186 ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ, 144 ವಿದ್ಯಾರ್ಥಿಗಳಿಗೆ 4 ಲಕ್ಷ ರೂ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಸಮಾಜ ಬಾಂಧವರು, ವಿದ್ಯಾರ್ಥಿಗಳು, ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿಭಾಗವಹಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಖಜಾಂಚಿ ಇಂದುವಾಸಿ ದತ್ತಾತ್ರೇಯ, ಹಿಂಗೋಲಿ ನರೇಂದ್ರ, ಪ್ರಾಣೇಶ ಶೆಟ್ಟಿ ಇದ್ದರು.