ಅರಕೇರಾ: ಪ್ರತಿಭಾವಂತ ಮಕ್ಕಳನ್ನು ಗುರುತಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಸಿಆರ್‌ಪಿ ಬಸವರಾಜ ಹೇಳಿದರು.
ಮಲ್ಲಾಪುರ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಗುರುವಾರ ಏರ್ಪಡಿಸಿದ್ದ ಬಿ.ಗಣೇಕಲ್ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರತಿ ಮಕ್ಕಳಲ್ಲೂ ತಮ್ಮದೇ ಆದ ಪ್ರತಿಭೆ ಅಡಗಿರುತ್ತದೆ. ಶಿಕ್ಷಕರು ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕು. ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ವ್ಯಕ್ತಿತ್ವ ವಿಕಸನಕ್ಕೆ ಎಲ್ಲ ಚಟುವಟಿಕೆಗಳು ಸಹಕಾರಿಯಾಗುತ್ತವೆ ಎಂದರು.
ಶಿವರಾಜ ಬಾಲೆ, ಜಗನ್ನಾಥ ನಾಯಕ, ಬೂದೆಪ್ಪ ದೊಸಗಿನ್, ಕೃಷ್ಣಮೂರ್ತಿ ಬಾಲೆ ಇದ್ದರು. ಶಿಕ್ಷಕರಾದ ಸಾವಿತ್ರಿ ಸ್ವಾಗತಿಸಿದರು, ಮಂಜುನಾಥ ನಾಯಕ ನಿರೂಪಿಸಿದರು, ಅಪ್ಸನಾ ವಂದಿಸಿದರು.