ವಿಜಯವಾಣಿ ಸುದ್ದಿಜಾಲ ಕಡಬ
ಪ್ರಸಕ್ತ ದಿನಗಳಲ್ಲಿ ನಮ್ಮ ಬದುಕು, ಭಾಷೆ, ಸಂಸ್ಕೃತಿ ಬಗ್ಗೆ ಅವಲೋಕನ, ಚಿಂತನೆ ಕಡಿಮೆಯಾಗಿದೆ. ತುಳು ಸಭಾಭವನದಿಂದ ಬರುವ ಆದಾಯವನ್ನು ತುಳು ಶಿಕ್ಷಣ ಕ್ಷೇತ್ರಕ್ಕೆ ಮಿಸಲಿಟ್ಟು ತುಳು ಭಾಷೆ, ಸಂಸ್ಕೃತಿ, ಸಾಹಿತ್ಯ ಕ್ಷೇತ್ರಕ್ಕೆ ವಿಶೇಷ ನಿಧಿಯನ್ನಾಗಿ ಉಪಯೋಗಿಸಲಾಗುವುದು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಹೇಳಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ರಾಮಕುಂಜ ಗ್ರಾಮದ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ನೇತ್ರಾವತಿ ತುಳುಕೂಟ ರಾಮಕುಂಜ ಆಶ್ರಯದಲ್ಲಿ ಶಾಲಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತುಳು ವಿದ್ಯಾರ್ಥಿಲೆನ ಪ್ರತಿಭಾ ಕಾರಂಜಿ ಹಾಗೂ ತುಳು ಕಲ್ಪಾರ್ತಿಲೆನ ರಸಮಂಟಮೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೈದ್ಯಾಧಿಕಾರಿ ಡಾ.ರಾಜಾರಾಮ್ ಕೆ.ಬಿ. ಉದ್ಘಾಟಿಸಿದರು. ನೇತ್ರಾವತಿ ತುಳುಕೂಟ ಅಧ್ಯಕ್ಷ ಕೆ.ಸೇಸಪ್ಪ ರೈ, ರಾಮಕುಂಜ ಗ್ರಾಪಂ ಅಧ್ಯಕ್ಷೆ ಸುಚೇತಾ ಬಿ. ಮಾತನಾಡಿದರು. ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಗಿರೀಶ್ ಎ.ಪಿ., ಜತೆ ಕಾರ್ಯದರ್ಶಿ ಅನಿತಾ ಉಪಸ್ಥಿತರಿದ್ದರು.
ಪ್ರೌಢಶಾಲಾ ಮುಖ್ಯಶಿಕ್ಷಕಿ ಗಾಯತ್ರಿ ಯು.ಎನ್. ಸ್ವಾಗತಿಸಿದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಲೋಹಿತಾ ಎ. ವಂದಿಸಿದರು. ಸಹ ಶಿಕ್ಷಕಿಯರಾದ ಸರಿತಾ ಮತ್ತು ಸಂಚಿತ ಕಾರ್ಯಕ್ರಮ ನಿರ್ವಹಿಸಿದರು.