ಬ್ಯಾಡಗಿ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ. 80ಕ್ಕಿಂತ ಹೆಚ್ಚು ಅಂಕ ಪಡೆದ ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹುಬ್ಬಳ್ಳಿಯ ಅಮರಗೋಳದ ವಿದ್ಯಾಧಿರಾಜ ಕಲ್ಯಾಣ ಮಂಟಪದಲ್ಲಿ ಅ. 1ರಂದು ಬೆಳಗ್ಗೆ 10 ಗಂಟೆಗೆ ಜರುಗಲಿದೆ ಎಂದು ಉಪ್ಪಾರ ಮಹಾಸಭಾ ಹಾವೇರಿ ಜಿಲ್ಲಾಧ್ಯಕ್ಷ ಮಂಜುನಾಥ ಉಪ್ಪಾರ ತಿಳಿಸಿದ್ದಾರೆ.
ಈ ಕುರಿತು ಶುಕ್ರವಾರ ಪ್ರಕಟಣೆ ನೀಡಿದ ಅವರು, ಹಾವೇರಿ ಜಿಲ್ಲೆಯ ಉಪ್ಪಾರ ಸಮಾಜದ ವಿದ್ಯಾರ್ಥಿಗಳು ಅಂಕಪಟ್ಟಿ ಹಾಗೂ ನಿಗದಿಪಡಿಸಿದ ದಾಖಲೆಗಳೊಂದಿಗೆ ಸೆ. 30 ರೊಳಗೆ ಜಿಲ್ಲಾಧ್ಯಕ್ಷರ ಬಳಿ ಅರ್ಜಿ ಸಲ್ಲಿಸಬೇಕು. ಕಾರ್ಯಕ್ರಮದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ, ಸಮಾಜದ ಪ್ರಮುಖ ಸಾಧಕರು, ಹಿರಿಜೀವಿಗಳು, ವಿದ್ಯಾರ್ಥಿಗಳಿಗೆ ಸನ್ಮಾನ ಏರ್ಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.