ವಿಜಯವಾಣಿ ಸುದ್ದಿಜಾಲ ಉಡುಪಿ
ದಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಹಾಗೂ ಮಹಾಲಕ್ಷ್ಮೀ ಕೋ-ಆಪ್ ಬ್ಯಾಂಕ್ ಎರಡೂ ಸಹ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಯಶಸ್ವಿ ಸಹಕಾರಿ ಸಂಸ್ಥೆಯಾಗಿ ಮುನ್ನಡೆಯುತ್ತಿದೆ. ಎರಡೂ ಸಂಸ್ಥೆಯ ಮೂಲಕ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿವರ್ಷವೂ ಸಾವಿರಾರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿದ್ದಾರೆ. ಅದನ್ನು ಸ್ವೀಕರಿಸಿದ ಮಕ್ಕಳಿಗೆ ಶೈಕ್ಷಣಿಕ ಸಾಧನೆಗೆ ಇನ್ನಷ್ಟು ಪ್ರೇರಣೆ ಸಿಗಲಿ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಆಶಯ ವ್ಯಕ್ತಪಡಿಸಿದರು.
ಮಂಗಳೂರಿನ ಉರ್ವ ಮಾರಿಯಮ್ಮ ದೇವಸ್ಥಾನದ ಸಭಾಂಗಣದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಹಾಗೂ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 650 ವಿದ್ಯಾರ್ಥಿಗಳಿಗೆ ಫೆ.15ರಂದು ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಮಂಗಳೂರು ಮೇಯರ್ ಮನೋಜಕುಮಾರ್ ಮಾತನಾಡಿ, ಪ್ರತಿಭಾ ಪುರಸ್ಕಾರ ಸ್ವೀಕರಿಸಿದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ವಿಜೇತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಫೆಡರೇಷನ್ನ ವ್ಯವಸ್ಥಾಪಕ ನಿರ್ದೇಶಕಿ ದರ್ಶನಾ ವಂದಿಸಿದರು.