ಜಿಲ್ಲೆ

24ರಂದು ಬಜೆಟ್ ಪೂರ್ವಭಾವಿ ಸಭೆ

ನಾಗೇಶ ಎಸ್

ತಿ.ನರಸೀಪುರ: ಪಟ್ಟಣದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸ್ತ್ರೀಶಕ್ತಿ ಭವನದಲ್ಲಿ ಮಾ.24ರಂದು ಬೆಳಗ್ಗೆ 11 ಗಂಟೆಗೆ ಪುರಸಭೆಯ 2025-26ನೇ ಸಾಲಿನ ಆಯ-ವ್ಯಯದ ಸಾರ್ವಜನಿಕ ಸಮಾಲೋಚನೆ ಸಭೆಯನ್ನು ಕರೆಯಲಾಗಿದೆ. ಅಧ್ಯಕ್ಷೆ ಬಿ.ವಸಂತಾ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಆಯ-ವ್ಯಯದ ಪೂರ್ವಭಾವಿ ಸಾರ್ವಜನಿಕ ಸಭೆಯಲ್ಲಿ ಪುರಸಭೆ ವ್ಯಾಪ್ತಿಯ ಅಭಿವೃದ್ಧಿಗಾಗಿ ಚರ್ಚಿಸುವ ವಿಚಾರದ ಸಂಬಂಧ ಸಾರ್ವಜನಿಕರು ಸೇರಿದಂತೆ ಸಂಘ, ಸಂಸ್ಥೆಗಳ ಮುಖ್ಯಸ್ಥರು ಹಾಗೂ ನಿವಾಸಿಗಳು ಸಭೆಯಲ್ಲಿ ಭಾಗವಹಿಸಿ ಸಲಹೆ, ಸೂಚನೆಗಳನ್ನು ನೀಡಬೇಕೆಂದು ಮುಖ್ಯಾಧಿಕಾರಿ ಬಿ.ಕೆ. ವಸಂತಕುಮಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.