ಜಿಲ್ಲೆ

ಅಧಿವೇಶನದ ಪೂರ್ವ ಸಿದ್ಧತೆ ಪರಿಶೀಲನೆ

ಜಗದೀಶ ಹೊಂಬಳಿ

ಬೆಳಗಾವಿ: ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ನಡೆಯಲಿರುವ ಬೆಳಗಾವಿ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಹಿನ್ನೆಲೆ ನಡೆಯುತ್ತಿರುವ ಪೂರ್ವ ಸಿದ್ಧತೆಗಳನ್ನು ಎಐಸಿಸಿ ರಾಜ್ಯ ಪ್ರಭಾರಿ ರಣದೀಪ್ ಸುರ್ಜೆವಾಲಾ, ಡಿಸಿಎಂ ಡಿ.ಕೆ. ಶಿವಕುಮಾರ್ ಸೋಮವಾರ ಪರಿಶೀಲಿಸಿದರು.

ಸಿಪಿ.ಎಡ್ ಮೈದಾನ ಹಾಗೂ ಮಹಾತ್ಮಾ ಗಾಂಧೀಜಿ ಅವರು ಭೇಟಿ ನೀಡಿದ ವೀರ ಸೌಧ, ಗಾಂಧಿ ಭವನಕ್ಕೆ ಭೇಟಿ ನೀಡಿದರು. ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಆಸೀಫ್ ಸೇಠ್, ಗಣೇಶ ಹುಕ್ಕೇರಿ, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಇತರರಿದ್ದರು.