ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶ್ವ ರೇಬಿಸ್ ದಿನಾಚರಣೆಯ ಜಾಗೃತಿ ಕಾರ್ಯಕ್ರಮ ನಡೆಯಿತು. ವೈದ್ಯರಾದ ಭರತ್ ಪದ್ಮಶಾಲಿ, ಮಲ್ಲೇಶಪ್ಪ, ಉಷಾ, ನಿಹಾರಿಕಾ, ವಿಶ್ವನಾಥ, ತಾಲೂಕು ಮಟ್ಟದ ಆರೋಗ್ಯ ಅಧಿಕಾರಿಗಳಾದ ಕೆ.ಶೋಭಾ, ಪಿ.ಬಸವರಾಜ, ಈರಣ್ಣ, ಹರೀಶ್, ಶುಶ್ರೂಷಣಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ ಇದ್ದರು. 
ಜಿಲ್ಲೆ

ಮುಂಜಾಗ್ರತಾ ಕ್ರಮ ಕೈಗೊಳ್ಳಿ

ರುದ್ರಪ್ಪ ವಾಲಿ

ಕಂಪ್ಲಿ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಶುಕ್ರವಾರ ತಾಲೂಕು ಮಟ್ಟದ ವಿಶ್ವ ರೇಬಿಸ್ ದಿನಾಚರಣೆ ನಿಮಿತ್ತ ಜಾಗೃತಿ ಕಾರ್ಯಕ್ರಮ ನಡೆಯಿತು.

ಅಧ್ಯಕ್ಷತೆವಹಿಸಿದ್ದ ಆಡಳಿತ ವೈದ್ಯಾಧಿಕಾರಿ ಡಾ.ರವೀಂದ್ರ ಕನಕೇರಿ ಮಾತನಾಡಿ, ರೇಬಿಸ್ ಒಂದು ಮಾರಣಾಂತಿಕ ಕಾಯಿಲೆಯಾಗಿದ್ದು ಸೂಕ್ತ ಮುಂಜಾಗ್ರತೆ ಅಗತ್ಯ.

ಈ ದಿಸೆಯಲ್ಲಿ ರೇಬಿಸ್ ಹರಡುವ ವಿಧಾನ, ರೇಬಿಸ್ ಲಕ್ಷಣಗಳು, ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳು, ಸೂಕ್ತ ಚಿಕಿತ್ಸೆ, ರೇಬಿಸ್ ನಿರೋಧಕ ಚುಚ್ಚುಮದ್ದುಗಳ ಬಗ್ಗೆ ಮಾಹಿತಿ ಅರಿತುಕೊಳ್ಳಬೇಕಿದೆ ಎಂದರು. ಕಾರ್ಯಕ್ರಮದಲ್ಲಿ ರೇಬಿಸ್ ಕುರಿತಂತೆ ಸಮಗ್ರ ಮಾಹಿತಿ ನೀಡಿದರು.