ಪಿರಿಯಾಪಟ್ಟಣ: ಸ್ವಚ್ಛತೆಗೆ ಹೆಚ್ಚು ಒತ್ತು ನೀಡುವ ಮೂಲಕ ಸಾಂಕ್ರಾಮಿಕ ಕಾಯಿಲೆಗಳು ಹರಡದಂತೆ ಮುಂಜಾಗ್ರತೆ ವಹಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ಕೆ.ಶ್ರೀನಿವಾಸ್ ತಿಳಿಸಿದರು.
ಪಟ್ಟಣದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ಡೆಂೆ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ನಗರ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಮುದಾಯದ ಸಹಕಾರ ಅತ್ಯಗತ್ಯ ಎಂದರು.
ತಾಲೂಕು ಪಂಚಾಯಿತಿ ಇಓ ಡಿ.ಬಿ.ಸುನಿಲ್ ಕುಮಾರ್ ಮಾತನಾಡಿ, ಗ್ರಾಮ ಪಂಚಾಯಿತಿಯ ಟಾಸ್ಕ್‌ಫೋರ್ಸ್‌ಗಳ ಮುಖಾಂತರ ಪಂಚಾಯಿತಿ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಶಾನುಭೋಗನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಸುನಿಲ್ ಕುಮಾರ್ ಮಾತನಾಡಿ, ನಮ್ಮ ಸುತ್ತ ಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಂಡರೆ ಕಾಯಿಲೆಗಳಿಂದ ದೂರವಿರಬಹುದು. ಆರೋಗ್ಯಕರ ಜೀವನ ನಡೆಸಬಹುದು ಎಂದರಲ್ಲದೆ, ಡೆಂೆ ಹರಡುವ ವಿಧಾನ ಮತ್ತು ಅದನ್ನು ತಡೆಗಟ್ಟುವ ಕುರಿತು ಮಾಹಿತಿ ನೀಡಿದರು.
ಆರೋಗ್ಯ ನಿರೀಕ್ಷಣಾಧಿಕಾರಿ ರವಿ ಮಾತನಾಡಿದರು. ಕಾರ್ಯಕ್ರಮದಲ್ಲಿ ತಾಪಂ ಸಹಾಯಕ ನಿರ್ದೇಶಕ ಜಿ.ಸಿ.ಮಹದೇವ್, ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಲತಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ಆರ್.ಪ್ರಕಾಶ್, ಜಿಲ್ಲಾ ಮೇಲ್ವಿಚಾರಕ ಸಿದ್ದೇಗೌಡ, ಲಲಿತಾ, ಅನಿಲ್, ಉಷಾ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.