ರಾಯಚೂರು ಜಿಲ್ಲೆಯಲ್ಲಿ ಮಾ.೦೧ರಿಂದ ೨೦ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ-೦೧ನ್ನು ಸರ್ಕಾರದ ನಿಯಮಾನುಸಾರ ಮತ್ತು ಅಚ್ಚುಕಟ್ಟಾಗಿ ನಡೆಸುವಂತೆ ಅಪಾರ ಜಿಲ್ಲಾಽಕಾರಿ ಶಿವಾನಂದ ಅವರು ಸಂಬAಽಸಿದ ಅಽಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಽಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ದ್ವಿತೀಯ ಪಿಯುಸಿ ಪರೀಕ್ಷೆ-೧ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಮಾ.೦೧ರಿಂದ ೨೦ರವರೆಗೆ ೪೩ ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾe್ಞÉ ಜÁರಿಗೊಳಿಸಲಾಗುವುದು. ಪರೀಕ್ಷಾರ್ಥಿಗಳು, ಪರೀಕ್ಷಾ ಕೇಂದ್ರದ ಅಽಕಾರಿಗಳು ಸಿಬ್ಬಂದಿ ಹೊರತುಪಡಿಸಿ ಯಾವುದೇ ವ್ಯಕ್ತಿಗಳು ಓಡಾವಂತಿಲ್ಲ. ಮತ್ತು ಪರೀಕ್ಷಾ ಕೇಂದ್ರದ ಸುತ್ತಲೂ ಯಾವುದೇ ಸೈಬರ್ ಕೆ-É ಮತ್ತು ಝರಾಕ್ಸ್ ಅಂಗಡಿ ತೆಗೆಯುವಂತಿಲ್ಲ ಎಂದು ಸೂಚನೆ ನೀಡಿದರು.
ರಾಯಚೂರಿನಲ್ಲಿ ೧೩, ಲಿಂಗಸಗೂರಿನÀಲ್ಲಿ ೦೮, ದೇವದುರ್ಗದಲ್ಲಿ ೦೪, ಸಿಂಧನೂರಿನಲ್ಲಿ ೦೯, ಮಾನ್ವಿಯಲ್ಲಿ ೦೫, ಮಸ್ಕಿಯಲ್ಲಿ ೦೨, ಸಿರವಾರದಲ್ಲಿ ೦೨ ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು ೪೩ ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿವೆ. ೨೨,೪೬೨ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮೊದಲ ಬಾರಿಗೆ ವೆಬ್ ಕಾಸ್‌ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆ ಮಾಡಬೇಕು ಮತ್ತು ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಒದಗಿಸುವಂತೆ ಸಾರಿಗೆ ಇಲಾಖೆಯ ಅಽಕಾರಿಗಳಿಗೆ ಸೂಚಿಸಿದರು.
ಸಂದರ್ಭದಲ್ಲಿ ಎಎಸ್ಪಿ ಜಿ.ಹರೀಶ್, ಡಿವೈಎಸ್ಪಿ ಸತ್ಯನಾರಾಯಣ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ರಂಗಪ್ಪ ನಾಯಕ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಹಿರಿಯ ಅಽಕಾರಿ ಎಂ.ಸುಧಾ,ಎಸಿ ಗಜಾನನ ಬಾಳೆ ಸೇರಿದಂತೆ ಜಿಲ್ಲೆಯ ಎಲ್ಲ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಽಕಾರಿಗಳು, ವಿವಿಧ ಕಾಲೇಜಿನ ಪ್ರಾಂಶುಪಾಲರು, ಪರೀಕ್ಷೆಗೆ ನಿಯೋಜನೆಗೊಂಡ ಅಽಕಾರಿಗಳು ಇದ್ದರು.