ಜಿಲ್ಲೆ

ಅರಿಯಡ್ಕದಲ್ಲಿ ಪೂರ್ವಭಾವಿ ಸಭೆ

ಪುತ್ತೂರು ಗ್ರಾಮಾಂತರ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅ.15ರಂದು ಪುತ್ತೂರಿನಲ್ಲಿ ನಡೆಯಲಿರುವ ಗಾಂಧಿ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅರಿಯಡ್ಕ ವಲಯ ಕಾರ್ಯಕ್ಷೇತ್ರದ ಪೂರ್ವಭಾವಿ ಸಭೆ ಅರಿಯಡ್ಕದಲ್ಲಿ ನಡೆಯಿತು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಲಯ ಮೇಲ್ವಿಚಾರಕ ಹರೀಶ್ ಕುಲಾಲ್ ಮಾತನಾಡಿ, ಕಾರ್ಯಕ್ರಮದಲ್ಲಿ ಸಂಘದ ಎಲ್ಲ ಸದಸ್ಯರು, ಊರಿನ ಗಣ್ಯರು, ಭಜನಾ ಮಂದಿರ, ದೇವಸ್ಥಾನ, ದೈವಸ್ಥಾನ, ಹಾಲು ಉತ್ಪಾದಕರ ಸಂಘ, ಶಾಲಾ ಕಾಲೇಜಿನ ಮುಖ್ಯಸ್ಥರು, ವಿವಿಧ ಸಂಘ ಸಂಸ್ಥೆ, ಯೋಜನೆ ಮತ್ತು ಯೋಜನೇತರ ಸದಸ್ಯರು ಪಾಲ್ಗೊಳ್ಳುವಂತೆ ಕಾರ್ಯಕ್ರಮದ ಕುರಿತು ಮಾಹಿತಿ ನೀಡಬೇಕು ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅರಿಯಡ್ಕ ವಲಯಾಧ್ಯಕ್ಷ ದಿನೇಶ್ ರೈ ಕುತ್ಯಾಳ ಅಧ್ಯಕ್ಷತೆ ವಹಿಸಿದ್ದರು. ಯೋಜನೆಯ ಅರಿಯಡ್ಕ ವಲಯದ ಸೇವಾ ಪ್ರತಿನಿಧಿಗಳು ಭಾಗವಹಿಸಿದ್ದರು. ಮಾಡ್ನೂರು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಲೀಲಾವತಿ ಸ್ವಾಗತಿಸಿದರು. ಮೇನಾಲ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಸುಂದರ್ ಜಿ. ವಂದಿಸಿದರು. ಸಿಎಸ್‌ಸಿ ಕೇಂದ್ರದ ಕೇಂದ್ರದ ಸಂಧ್ಯಾ ಉಪಸ್ಥಿತರಿದ್ದರು.