ಯಾದಗಿರಿ : 2025ರ ಜನವರಿ 26 ರಂದು ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸುವ ಹಿನ್ನೆಲೆ ಸಭೆಯು ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಅವರ ಅಧ್ಯಕ್ಷತೆಯಲ್ಲಿ 2025ರ ಜನವರಿ 8ರ ಬುಧವಾರ ರಂದು ಸಂಜೆ 5 ಗಂಟೆಗೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪೂರ್ವ ಸಿದ್ಧತಾ ಸಭೆಯನ್ನು ಆಯೋಜಿಸಲಾಗಿದೆ ಎಂದು ಯಾದಗಿರಿ ಅಪರ ಜಿಲ್ಲಾಧಿಕಾರಿ ಶ್ರೀ ಶರಣಬಸಪ್ಪ ಕೋಟೆಪ್ಪಗೊಳ ಅವರು ತಿಳಿಸಿದ್ದಾರೆ.
ಗಣರಾಜ್ಯೊತ್ಸವ ದಿನಾಚರಣೆಯನ್ನು ಜಿಲ್ಲಾಡಳಿತ ವತಿಯಿಂದ ಆಚರಣೆ ಮಾಡಲಾಗುತ್ತಿದ್ದು, ಈ ದಿನಾಚರಣೆಯನ್ನು ಆಚರಿಸುವ ಪ್ರಯುಕ್ತ ಸಭೆಯನ್ನು ಏರ್ಪಡಿಸಲಾಗಿದೆ. ಸದರಿ ಸಭೆಗೆ ಜಿಲ್ಲಾಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ಪ್ರಮುಖ ಸಂಘ ಸಂಸ್ಥೆಯ ಮುಖಂಡರು, ಪ್ರತಿನಿಧಿಗಳನ್ನು ಮಾತ್ರ ಹಾಜರಿರುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.