ಕುಂದಾಪುರ: ಪ್ರಯತ್ನವು ಬದುಕನ್ನು ಬೆಳಕಿನ ದಾರಿಯಲ್ಲಿ ಕೊಂಡೊಯ್ಯುವ ನಂದಾದೀಪ. ಪದವಿ ಶಿಕ್ಷಣದಲ್ಲಿ ವಿದ್ಯೆ ಮತ್ತು ಕೌಶಲದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಪೂರ್ವಸಿದ್ಧತೆ ಮಾಡಿಕೊಂಡರೆ ಯಶಸ್ಸು ನಿಶ್ಚಿತ ಎಂದು ತೆಂಕನಿಡಿಯೂರು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರೊ.ಪ್ರಶಾಂತ ನೀಲಾವರ ಹೇಳಿದರು.
ಕುಂದಾಪುರದ ಕೋಟೇಶ್ವರ ಶ್ರೀ ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಶುಕ್ರವಾರ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನ ಎದುರಿಸುವ ಕಲೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸಂದರ್ಶನ ಎದುರಿಸುವ ಕಲೆ ಕುರಿತು ಸಂಪನ್ಮೂಲ ವ್ಯಕ್ತಿಯಾಗಿದ್ದ ಮಾಹೆ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ.ಪ್ರವೀಣ ಶೆಟ್ಟಿ ಮಾಹಿತಿ ನೀಡಿದರು. ಪ್ರಾಂಶುಪಾಲ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಚಾಲಕ ನಾಗರಾಜ ಯು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ, ಕಾರ್ತಿಕ್ ಪೈ, ವಿದ್ಯಾರ್ಥಿ ಪ್ರತಿನಿಧಿಗಳಾದ ಅಂಕಿತಾ ಮತ್ತು ಶಶಾಂಕ ಉಪಸ್ಥಿತರಿದ್ದರು. ಮನೋಹರ್ ಬಿ. ಸ್ವಾಗತಿಸಿದರು. ರಂಜಿತ್ ವಂದಿಸಿದರು. ಅಂಕಿತಾ ಕಾರ್ಯಕ್ರಮ ನಿರೂಪಿಸಿದರು.