ಜಿಲ್ಲೆ

ಜಯಂತಿಗಳ ಆಚರಣೆಗೆ ಸಿದ್ಧತೆ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆ. 19ರಂದು ಬೆಳಗ್ಗೆ 11 ಗಂಟೆಗೆ ಶ್ರೀ ನೂಲಿಯ ಚಂದಯ್ಯ ಜಯಂತಿ, ಆ. 20ರಂದು ಸಂಜೆ 4 ಗಂಟೆಗೆ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಹಾಗೂ ಆ. 26ರಂದು ಬೆಳಗ್ಗೆ 11.30ಕ್ಕೆ ಶ್ರೀಕೃಷ್ಣ ಜಯಂತಿಯನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್​ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಯಂತಿಗಳ ಪ್ರಯುಕ್ತ ಶಾಲಾ ಮಕ್ಕಳಿಗೆ ಪ್ರಬಂಧ, ರಸಪ್ರಶ್ನೆ ಹಾಗೂ ಎಸ್ಸೆಸ್ಸೆಲ್ಸಿ, ದ್ವೀತಿಯ ಪಿಯು ಮತ್ತು ಪದವಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಕುಮಾರ ಬೆಕ್ಕೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಗೋಪಾಲ ಲಮಾಣಿ, ವಿವಿಧ ಸಮಾಜದ ಮುಖಂಡರು, ಇತರರು ಇದ್ದರು.