ಹೊಸಕೋಟೆ : ನಗರದ ಚೆನ್ನಬೈರೇಗೌಡ ಜಿಲ್ಲಾ ಕ್ರೀಡಾಂಗಣದಲ್ಲಿ ಆ.15ರಂದು ಸ್ವಾತಂತ್ರ$್ಯ ದಿನ ಆಚರಿಸಲು ತಾಲೂಕು ಆಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ತಾಲೂಕು ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಹೊಸಕೋಟೆಯಲ್ಲಿ ಪ್ರತಿವರ್ಷ ವಿಭಿನ್ನವಾಗಿ ಆಚರಣೆ ಮಾಡುತ್ತಿದ್ದು, ಈ ಬಾರಿಯೂ ಎಲ್ಲ ಅಧಿಕಾರಿಗಳು ಜವಾಬ್ದಾರಿ ತೆಗೆದುಕೊಂಡು ಆಚರಣೆ ಮಾಡಬೇಕು. ಬೆಳಗ್ಗೆ 8.30ಕ್ಕೆ ಎಲ್ಲ ಅಧಿಕಾರಿಗಳು ಹಾಗೂ ಶಾಲಾ&ಕಾಲೇಜು ವಿದ್ಯಾರ್ಥಿಗಳು ಕ್ರೀಡಾಂಗಣದಲ್ಲಿ ಹಾಜರಿರಬೇಕು. 9 ಗಂಟೆಗೆ ಧ್ವಜಾರೋಹಣ ನೆರವೇರಿಸಿ 12 ಗಂಟೆಗೆ ಕಾರ್ಯಕ್ರಮ ಮುಕ್ತಾಯಗೊಳುತ್ತದೆ. ಸಾಂಸತಿಕ ಕಾರ್ಯಕ್ರಮಗಳು, ಪಥ ಸಂಚಲನ ಸೇರಿ ಸ್ವಾತಂತ್ರ್ಯೋತ್ಸವದ ಎಲ್ಲ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಎಂದು ಸೂಚಿಸಿದರು. ಆ.16ರಂದು ತಾಲೂಕು ಆಡಳಿತದಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಿಸಲು ತಾಲೂಕು ಆಡಳಿತ ಹಾಗೂ ಯಾದವ ಸಂದಿಂದ ಶಾಸಕ ಶರತ್ ಬಚ್ಚೇಗೌಡರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
ತಾಲೂಕು ಯಾದವ ಸಂದ ಪ್ರಧಾನ ಕಾರ್ಯದರ್ಶಿ ಚನ್ನಪ್ಪ ಮಾತನಾಡಿ, ಸರ್ಕಾರ ತಾಲೂಕು ಮಟ್ಟದ ಕೃಷ್ಣ ಜನ್ಮಾಷ್ಠಮಿಗೆ 25 ಸಾವಿರ ಅನುದಾನ ನೀಡಲು ಆದೇಶ ಮಾಡಿದೆ ಆದರೆ ರಾಜ್ಯದಲ್ಲಿ ಎಲ್ಲೂ ಕೂಡ ಬಿಡುಗಡೆಯಾಗಿಲ್ಲ. ಅದರಿಂದ ಸಂದಿಂದ ಹಾಗೂ ಸಮುದಾಯದ ಮುಖಂಡರು ವೈಯಕ್ತಿಕವಾಗಿ ಸಂಪನ್ಮೂಲವನ್ನು ಕ್ರೂಢಿಕರಿಸಿ ಕೃಷ್ಣ ಜನ್ಮಾಷ್ಠಮಿ ಆಚರಣೆ ಮಾಡಲಾಗುವುದು ಎಂದರು.
ಸಾಧಕರನ್ನು ಗುರುತಿಸಿ : ಸ್ವಾತಂತ್ರ್ಯ ದಿನಾಚರಣೆಗೆ ಶಾಸಕರು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷರು, ವಿವಿಧ ಕ್ಷೇತ್ರದ ಸಾಧಕರು ಹಾಗೂ ಪತ್ರಕರ್ತರನ್ನು ಗುರುತಿಸಿ ಗೌರವಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂದ ಅಧ್ಯಕ್ಷ ಜಿ.ಶ್ರೀನಿವಾಸ್ ಮನವಿ ಮಾಡಿದರು.
ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಗೆ ಸೂಚನೆ : ಪ್ರತಿ ವರ್ಷದಂತೆ ತಾಲೂಕು ಕಚೇರಿಯಲ್ಲಿ ಸರಳವಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲು ಯಾದವ ಸಮುದಾಯದ ಮುಖಂಡರ ಮನವಿಯಂತೆ ಶಾಸಕ ಶರತ್ ಬಚ್ಚೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ ಪ್ರತಿ ಗ್ರಾಪಂನಲ್ಲಿ ಶ್ರೀ ಕೃಷ್ಣಾಜನ್ಮಾಷ್ಟಮಿ ಆಚರಿಸುವಂತೆ ಆದೇಶ ಮಾಡಿ ಎಂದು ತಾಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು.