ಕೋಡಿ ಸೀವಕ್‌ಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಸ್ವರೂಪಾ.  
ಜಿಲ್ಲೆ

ಸಮುದ್ರ ತೀರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಿದ್ಧತೆ

Karthika K.S

ಕುಂದಾಪುರ: ಪ್ರವಾಸಿ ಚಟುವಟಿಕೆಗಳು ನಡೆದಷ್ಟು ಸ್ಥಳೀಯರ ಆದಾಯ ಹೆಚ್ಚಾಗುತ್ತದೆ. ಬೇರೆ ಬೇರೆ ಊರುಗಳಿಂದ ಜನ ಆಗಮಿಸುತ್ತಾರೆ. ಡಿಜಿಟಲ್ ಸಾಧನ, ವಾಧ್ಯಮದ ಮೂಲಕ ತಿಳಿದುಕೊಳ್ಳುತ್ತಾರೆ. ಪ್ರವಾಸಿತಾಣಗಳಲ್ಲಿ ಸೌಕರ್ಯಗಳು ಉತ್ತಮವಾಗಿದ್ದಷ್ಟು ಮಹತ್ವ ಹೆಚ್ಚುತ್ತದೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಹೇಳಿದರು.

ಕುಂದಾಪುರದ ಕೋಡಿ ಸೀವಾಕ್‌ಗೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

ಹೊಸದಾಗಿ ಪ್ರವಾಸೋದ್ಯಮ ಚಟುವಟಿಕೆ ಹಮ್ಮಿಕೊಳ್ಳುವುದರಿಂದ ಈಗಾಗಲೇ ನಿರ್ವಹಿಸುತ್ತಿರುವವರಿಗೆ ಯಾವುದೇ ತೊಂದರೆಯಾಗುವುದಿಲ್ಲ. ರಾಜ್ಯ ಬಜೆಟ್ನಲ್ಲಿ ಮುಖ್ಯಮಂತ್ರಿಗಳು ೋಷಿಸಿದಂತೆ ಸಮುದ್ರ ತೀರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಸಿದ್ಧತೆಗಳಾಗುತ್ತಿವೆ. ಈಗಾಗಲೇ ಪ್ರವಾಸೋದ್ಯಮ ಪೂರಕ ಚಟುವಟಿಕೆ ನಡೆಸುತ್ತಿರುವವರು ತಮಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಮನವಿ ವಾಡಿದ್ದಾರೆ. ಯಾರಿಗೂ ಸಮಸ್ಯೆ ಆಗದಂತೆ ಮುತುವರ್ಜಿ ವಹಿಸಲಾಗುವುದು. ಈಗಾಗಲೇ ಇಲ್ಲಿ ಬೋಟಿಂಗ್, ಕಯಾಕಿಂಗ್, ಡಾಲಿನ್ ವೀಕ್ಷಣೆ ಇತ್ಯಾದಿ ನಡೆಯುತ್ತಿದೆ. ಅದರ ಜತೆಗೆ ವಾಟರ್ ಗೇಮ್ಸ್ ಮೊದಲಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ನಿತೇಶ್ ಕೆ.ಜೆ., ಅಧಿಕಾರಿ ಭವಿಷ್, ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್, ಕಂದಾಯ ನಿರೀಕ್ಷಕ ದಿನೇಶ್ ಮೊದಲಾದವರು ಇದ್ದರು.