ಬೆಂಗಳೂರು:ವೃಷಭಾವತಿ ನದಿಯಲ್ಲಿ ಕೊಳಚೆ ನೀರು ಹರಿಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸಮಗ್ರ ಯೋಜನೆ ರೂಪಿಸುವಂತೆ ಬಿಬಿಎಂಪಿ ಮುಖ್ಯಆಯುಕ್ತ ತುಷಾರ್ ಗಿರಿನಾಥ್, ಜಲಮಂಡಳಿ ಅಧಿಕಾರಿಗಳಿಗೆ ಶನಿವಾರ ಸೂಚಿಸಿದ್ದಾರೆ.
ವೃಷಭಾವತಿ ವ್ಯಾಲಿಗೆ ಎಲ್ಲೆಲ್ಲಿ ಕೊಳಚೆ ನೀರು ಬರುತ್ತಿದೆ ಎಂಬುದನ್ನು ಪರಿಶೀಲಿಸಿ ಪಟ್ಟಿ ಮಾಡಬೇಕು.ನದಿದ ಬದಿಯಲ್ಲಿರುವ ಅಪಾರ್ಟ್ಮೆಂಟ್ಗಳಿಂದ ಕೊಳಚೆ ನೀರು ಹರಿಯುತ್ತಿರುವ ಕುರಿತು ಪರಿಶೀಲಿಸಬೇಕು. ಅಪಾರ್ಟ್ಮೆಂಟ್ಗಳಲ್ಲಿ ಅಳವಡಿಸಿರುವ ತ್ಯಾಜ್ಯನಿರು ಸಂಸ್ಕರಣಾ ಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ಪರಿಶೀಲಿಸಬೇಕು. ಪಾಲಿಕೆ, ಜಲಮಂಡಳಿ,ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿಕೊಂಡು ಸಮಗ್ರ ಯೋಜನೆ ರೂಪಿಸಬೇಕೆಂದು ಶನಿವಾರ ನಡೆದ ಸಭೆಯಲ್ಲಿ ತಿಳಿಸಿದರು.
ಜಲಮಂಡಳಿಯಿಂದ ಎಷ್ಟು ಎಸ್ಟಿಪಿಗಳು ಕಾರ್ಯನಿರ್ವಹಿಸುತ್ತಿವೆ.ಹೊಸ ಎಸ್ಟಿಪಿಗಳ ನಿರ್ಮಾಣ ಸಂಬಂಧ ಯಾವ ರೀತಿಯಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂಬುದರ ಬಗ್ಗೆ ವಿವರವಾದ ಮಾಹಿತಿ ನೀಡಬೇಕು.ಕೊಳಚೆ ನೀರು ನದಿಗೆ ಸೇರುತ್ತಿರುವುದನ್ನು ಗುರುತಿಸಿ ಅದನ್ನು ಪೈಪ್ ಮೂಲಕ ಎಸ್ಟಿಪಿಗೆ ಹೋಗುವ ವ್ಯವಸ್ಥೆ ಮಾಡಬೇಕೆಂದು ತುಷಾರ್ ಗಿರಿನಾಥ್, ಅಧಿಕಾರಿಗಳಿಗೆ ತಾಕೀತು ಮಾಡಿದರು.
ಪಾಲಿಕೆ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್, ವಲಯ ಆಯುಕ್ತೆ ರಮ್ಯಾ, ಪ್ರಧಾನ ಅಭಿಯಂತರ ಡಾ. ಬಿ.ಎಸ್.ಪ್ರಹ್ಲಾದ್, ಕೆರೆಗಳ ವಿಭಾಗದ ಮುಖ್ಯ ಆಭಿಯಂತರ ವಿಜಯ್ ಕುಮಾರ್ ಹರಿದಾಸ್, ಪಾಲಿಕೆ, ಜಲಮಂಡಳಿ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಮತ್ತಿತರರಿದ್ದರು.
ಒತ್ತುವರಿ ತೆರವುಗೊಳಿಸಿ
ವೃಷಭಾವತಿ ವ್ಯಾಲಿಗೆ ಒಂದಿಕೊಂಡಂತೆ 42 ಕೆರೆಗಳು ಬರಲಿವೆ.ಒತ್ತುವರಿಯಾಗಿರುವ ಪ್ರದೇಶವನ್ನು ಗುರುತಿಸಬೇಕು. ಜಿಲ್ಲಾಧಿಕಾರಿಗಳ ಬಳಿ ಬಾಕಿಯಿರುವ ಪ್ರಕರಣಗಳನ್ನು ಭೂಮಾಪಕರಿಂದ ಸಮೀೆ ನಡೆಸಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ ತುಷಾರ್ ಗಿರಿನಾಥ್, ವೃಷಭಾವತಿಗೆ ಕಸ ಹಾಕದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಅಗತ್ಯವಿರುವ ಕಡೆಗಳಲ್ಲಿ ಫೆನ್ಸಿಂಗ್ ಅಳವಡಿಸುವ ಕಾರ್ಯವಾಗಬೇಕು. ಜೆಸಿಬಿ ಮೂಲಕ ಹೂಳೆತ್ತುವ ಕಾರ್ಯ ನಡೆಸಬೇಕು ಎಂದರು.
ಪಾಲಿಕೆ ವ್ಯಾಪ್ತಿಯಲ್ಲಿ 28 ಕಿ.ಮೀ.ವ್ಯಾಪ್ತಿಯಲ್ಲಿ ವೃಷಭಾವತಿ ಇದೆ. ವಿ&100 ವ್ಯಾಲಿ ಸ್ಯಾಂಕಿ ಕೆರೆಯಿಂದ ಬೆಂಗಳೂರು ವಿಶ್ವವಿದ್ಯಾಲಯದವರೆಗೆ 14 ಕಿ.ಮೀ. ಬರಲಿದೆ. ವಿ&200 ವ್ಯಾಲಿ ಗೊರಗುಂಟೆ ಪಾಳ್ಯ(ಪೀಣ್ಯಮೆಟ್ರೊ ನಿಲ್ದಾಣ)ದಿಂದ ಬೆಂಗಳೂರು ವಿವಿವರೆಗೆ 14 ಕಿ.ಮೀ.ಬರಲಿದೆ.
| ತುಷಾರ್ ಗಿರಿನಾಥ್. ಬಿಬಿಎಂಪಿ ಮುಖ್ಯ ಆಯುಕ್ತ.