ಜಿಲ್ಲೆ

ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಮಾಡಿಕೊಳ್ಳಿ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ವಿದ್ಯಾರ್ಥಿಗಳು ಕಾಲೇಜು ಶಿಕ್ಷಣ ಹಂತದಲ್ಲೇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಮಾಡಿಕೊಳ್ಳಬೇಕು ಎಂದು ಆಹಾರ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಡಾ. ಸದಾಶಿವ ಮರ್ಜಿ ಹೇಳಿದರು.

ನಗರದ ಲಿಂಗಾಯತ ವಿದ್ಯಾಭಿವೃದ್ಧಿ ಸಂಸ್ಥೆಯ ವಿಜ್ಞಾನ, ಕಲಾ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ 2024- 25ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುವ ಸಮಾರಂಭದಲ್ಲಿ ಅವರು ಮಾತನಾಡಿದರು.

ಎಂ.ಸಿ. ಹಿರೇಮಠ, ಲಿಂಗಾಯತ ವಿದ್ಯಾಭಿವೃದ್ಧಿ ಸಂಸ್ಥೆಯ ಕಾರ್ಯಾಧ್ಯಕ್ಷ ಆರ್.ಯು. ಬೆಳ್ಳಕ್ಕಿ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣದ ಆಯ್ಕೆ ಮತ್ತು ಗುರಿಯ ಬಗ್ಗೆ ತಿಳಿಸಿಕೊಟ್ಟರು.

ಸಂಸ್ಥೆಯ ಗೌರವ ಕಾರ್ಯದರ್ಶಿ ಸಿ.ಬಿ. ಮಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯ ಲೋಹಿತ ಕಾರೇಕರ ವಾರ್ಷಿಕ ವರದಿ ಮಂಡಿಸಿದರು.

ಪ್ರತಿಭಾವAತ ವಿದ್ಯಾರ್ಥಿಗಳು, ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.

ಸುನಿತಾ ನವಲೆ ನಿರೂಪಿಸಿದರು. ಶೈಲಾ ನಾಯಕ ಸ್ವಾಗತಿಸಿದರು. ಕವಿತಾ ಯಾಳಗಿ ಪರಿಚಯಿಸಿದರು. ಚೈತ್ರಾ ಹೊಸಮನಿ ವಂದಿಸಿದರು.