ವಿಜಯವಾಣಿ ಸುದ್ದಿಜಾಲ ಚಿಕ್ಕಬಳ್ಳಾಪುರ
ಜಿಲ್ಲೆಯಲ್ಲಿ ಮಳೆ ಹಾನಿ ನಿಯಂತ್ರಣ ಮತ್ತು ಪರಿಹಾರ ಕ್ರಮಗಳನ್ನು ಮತ್ತಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಸಜ್ಜಾಗಲು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ-ಡಳಿತ ಭವನದ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಪತ್ತು ನಿರ್ವಹಣಾ ಪ್ರಾ-ಧಿಕಾರದ ಸಭೆಯಲ್ಲಿ ಮಾತನಾಡಿದರು.
ಮುಂಗಾರು ಅವಧಿಯಲ್ಲಿ ಮಳೆಯಿಂದ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪ ಪರಿಸ್ಥಿತಿಯನ್ನು ಎದುರಿಸಲು ಎಲ್ಲ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಏನೇ ತೊಂದರೆಯಾದಲ್ಲಿ ಕೂಡಲೇ ಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಜೀವ ಮತ್ತು ಆಸ್ತಿ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಗ್ರಾಮೀಣ ಪ್ರದೇಶದಲ್ಲಿ ಕೃಷಿ ಹೊಂಡಗಳಲ್ಲಿ ಪಾಚಿ ಕಟ್ಟದಂತೆ, ಕಾಲ ಕಾಲಕ್ಕೆ ಸ್ವಚ್ಛತೆ ಕೈಗೊಳ್ಳಲು ಸಂಬಂಧಪಟ್ಟ ರೈತರಿಗೆ ತಿಳಿಸಬೇಕು. ಪ್ರಮುಖವಾಗಿ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಳ್ಳುವಂತಹ ಪ್ರಕರಣಗಳಿಗೆ ಆಸ್ಪದ ನೀಡಬಾರದು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎನ್.ಭಾಸ್ಕರ್, ಉಪ ವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ವಾಸುದೇವ್ ಇದ್ದರು.
ಹಲವು ವಿಚಾರಗಳ ಚರ್ಚೆ
ಮಳೆಗಾಲದ ಸಂದರ್ಭದಲ್ಲಿ ಆಯಾ ತಾಲೂಕಿನಲ್ಲಿರುವ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ, ಕಟ್ಟಡ ಸ್ಥಿತಿಗತಿಗಳ ಪರಿಶೀಲನೆ ಮತ್ತು ವರದಿ ಸಲ್ಲಿಕೆ, ಅಗ್ನಿ ಶಾಮಕದಳ ತುರ್ತು ಪರಿಸ್ಥಿತಿಗೆ ಅನುಗುಣವಾಗಿ ಅಗತ್ಯ ಸುರತಾ ಉಪಕರಣಗಳೊಂದಿಗೆ ಸಜ್ಜಾಗಿರುವಿಕೆ, ಅಗತ್ಯ ಸೇವೆಗೆ ಗೃಹ ರಕದಳ ಸಿಬ್ಬಂದಿ ಲಭ್ಯತೆ, ವಿದ್ಯುತ್ ತಂತಿಗಳು ಜೋತು ಬಿದ್ದಿರುವಿಕೆಯು ಕಂಡು ಬಂದಲ್ಲಿ ಕೂಡಲೇ ಸರಿಪಡಿಸುವಿಕೆ, ವಿದ್ಯುತ್ ಅವಡಗಳಿಗೆ ಕಡಿವಾಣ, ಜಿಲ್ಲೆಯಲ್ಲಿ ಎಲ್ಲ ತಾಲೂಕಿನ ಟಾಸ್ಕ್ ಫೋರ್ಸ್ ಕಮಿಟಿ ಚುರುಕು, ಸಾರ್ವಜನಿಕರಿಗೆ ತುರ್ತು ಸ್ಪಂದನೆಗಾಗಿ ತಾಲೂಕುಗಳಲ್ಲಿ ಕಂಟ್ರೋಲ್ ರೂಂ ಸ್ಥಾಪನೆಯ ಬಗ್ಗೆ ಚರ್ಚಿಸಲಾಯಿತು.
ಜಿಲ್ಲಾಸ್ಪತ್ರೆಗೆ ಡಿಸಿ ಭೇಟಿ
ಇಲ್ಲಿನ ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅನಿರೀತ ಭೇಟಿ ನೀಡಿ, ಪರಿಶೀಲಿಸಿದರು. ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕರು ಹಾಗೂ ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ ಸಲಹೆ ಸೂಚನೆಗಳನ್ನು ನೀಡಿದರು. ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರ, ತುರ್ತು ಚಿಕಿತ್ಸಾ ಟಕ, ಮಹಿಳೆಯರು ಮತ್ತು ನವಜಾತ ಶಿಶುವಿನ ಆರೈಕೆ ಕೊಠಡಿಗಳಿಗೆ ತೆರಳಿ, ರೋಗಿಗಳೊಂದಿಗೆ ಸಮಾಲೋಚನೆ ನಡೆಸಿದರು. ಕುಡಿಯುವ ನೀರಿನ ಟಕ, ಊಟದ ವ್ಯವಸ್ಥೆ, ಸ್ವಚ್ಛತೆಯನ್ನು ಪರಿಶೀಲಿಸಿದರು. ಈ ವೇಳೆ ನಂದಿ ವೈದ್ಯಕಿಯ ಕಾಲೇಜಿನ ಡೀನ್ ಡಾ.ಮಂಜುನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್. ಮಹೇಶ್ ಕುಮಾರ್, ಜಿಲ್ಲಾಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ.ರಮೇಶ್ ಇದ್ದರು.