ಮದ್ದೂರು ಪಟ್ಟಣದ ಸಿದ್ಧಾರ್ಥ ನಗರದಲ್ಲಿ ನಗರೋತ್ಥಾನ ಯೋಜನೆಯಡಿ 1.80 ಕೋಟಿ ರೂ. ವೆಚ್ಚದಲ್ಲಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಭೂಮಿಪೂಜೆ ನೆರವೇರಿಸಿದರು. ಎಂ.ಬಿ.ಸಚಿನ್, ಸಿದ್ದರಾಜು, ಮನೋಜ್, ಕಮಲ್‌ನಾಥ್ ಇದ್ದರು.  
ಜಿಲ್ಲೆ

ಮದ್ದೂರು ಮಾದರಿ ಪಟ್ಟಣವಾಗಿ ರೂಪಿಸಲು ಸಿದ್ಧತೆ

ಮಾದೇಶ್ ತಿ.ನರಸೀಪುರ

ಮದ್ದೂರು: ಪಟ್ಟಣದ ಎಲ್ಲ ರಸ್ತೆಗಳನ್ನು ಶೀಘ್ರವಾಗಿ ಅಭಿವೃದ್ಧಿಪಡಿಸಿ, ಮಾದರಿ ಪಟ್ಟಣವನ್ನಾಗಿ ರೂಪಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.


ಪಟ್ಟಣದ ಸಿದ್ಧಾರ್ಥನಗರ ಸೇರಿದಂತೆ ಹಲವು ಕಡೆ ಸೋಮವಾರ ನಗರೋತ್ಥಾನ ಯೋಜನೆಯಡಿ 1.80 ಕೋಟಿ ರೂ. ವೆಚ್ಚದಲ್ಲಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.


ಹಲವಾರು ವರ್ಷಗಳಿಂದ ಪಟ್ಟಣ ಸರಿಯಾಗಿ ಅಭಿವೃದ್ಧಿಯಾಗಿಲ್ಲ. ಪಟ್ಟಣದೊಳಗಿನ ರಸ್ತೆಗಳು ಡಾಂಬರಿಕರಣ ಕಂಡಿಲ್ಲ. ಕೊಳಚೆ ನೀರು ಎಲ್ಲೆಂದರಲ್ಲಿ ಹರಿಯುತ್ತದೆ. ಸರಿಯಾದ ಒಳಚರಂಡಿ ವ್ಯವಸ್ಥೆ ಇಲ್ಲ. ರಸ್ತೆಗಳು ಸಂಪೂರ್ಣ ಹದಗೆಟ್ಟಿದೆ. ಜತೆಗೆ ಮೂಲಸೌಕರ್ಯಗಳ ಕೊರತೆಯನ್ನು ಪಟ್ಟಣದ ನಿವಾಸಿಗಳು ಎದುರಿಸುತ್ತಿದ್ದಾರೆ. ಇವುಗಳನ್ನು ಸರಿಪಡಿಸಿ ಪಟ್ಟಣವನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಿ ರಾಜ್ಯದಲ್ಲಿ ಮಾದರಿಯನ್ನಾಗಿ ರೂಪಿಸಲಾಗುವುದು ಎಂದರು.


ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ತಂದು ಮದ್ದೂರು ಪಟ್ಟಣವನ್ನು ಸಮಗ್ರ ಅಭಿವೃದ್ಧಿ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಪಟ್ಟಣಕ್ಕೆ ಬೇಕಾಗುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.


ಪುರಸಭಾ ಸದಸ್ಯರಾದ ಎಂ.ಬಿ.ಸಚಿನ್, ಮನೋಜ್ ಕುಮಾರ್, ಸಿದ್ದರಾಜು, ಕಮಲ್‌ನಾಥ್, ಗ್ರಾ.ಪಂ. ಅಧ್ಯಕ್ಷ ತಿಮ್ಮೇಗೌಡ, ಮುಖಂಡರಾದ ಆರೀಫ್, ಮನ್ಸೂರ್, ಕೆ.ಎಂ.ರವಿ ಇದ್ದರು.