ಎಕ್ಸಲೆಂಟ್ ಪಿ.ಯು ಕಾಲೇಜಿನ ವಿದ್ಯಾರ್ಥಿನಿ ಪ್ರಸ್ತುತಿ ಶೆಟ್ಟಿ ಅವರನ್ನು ಕಾಲೇಜಿನ ಆಡಳಿತ ಮಂಡಳಿ ವತಿಯಿಂದ ಗೌರವಿಸಲಾಯಿತು.  
ಜಿಲ್ಲೆ

ಪ್ರಸ್ತುತಿ ಶೆಟ್ಟಿಗೆ ಎಕ್ಸಲೆಂಟ್ ಪಿ.ಯು. ಕಾಲೇಜಿನಿಂದ ಸನ್ಮಾನ

ಕುಂದಾಪುರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕೃಷಿ ವಿಜ್ಞಾನ ವಿಭಾಗದಲ್ಲಿ 222ನೇ ರ‌್ಯಾಂಕ್ ಪಡೆದ ಕುಂದಾಪುರ ಸುಣ್ಣಾರಿಯಲ್ಲಿರುವ ಎಕ್ಸಲೆಂಟ್ ಪಿ.ಯು ಕಾಲೇಜಿನ ವಿದ್ಯಾರ್ಥಿನಿ ಪ್ರಸ್ತುತಿ ಶೆಟ್ಟಿ ಅವರನ್ನು ಕಾಲೇಜಿನ ಆಡಳಿತ ಮಂಡಳಿ ವತಿಯಿಂದ ಗೌರವಿಸಲಾಯಿತು.

ಎಂ.ಎಂ.ಹೆಗ್ಡೆ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಮೊಳಹಳ್ಳಿ ಮಹೇಶ್ ಹೆಗ್ಡೆ, ಕಾಲೇಜಿನ ಪ್ರಾಂಶುಪಾಲ ನಾಗರಾಜ್ ಶೆಟ್ಟಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕೃಷಿ ವಿಜ್ಞಾನ ವಿಭಾಗದಲ್ಲಿ 222ನೇ ರ‌್ಯಾಂಕ್ ಪಡೆಯುವ ಮೂಲಕ ಪ್ರಸ್ತುತಿ ಶೆಟ್ಟಿ ಅವರು ಕುಂದಾಪುರ ಹಾಗೂ ಬೈಂದೂರು ತಾಲೂಕಿಗೆ ಪ್ರಥಮ ಸ್ಥಾನಿಯಾಗಿ ಸಾಧನೆ ಮೆರೆದಿದ್ದಾಳೆ. ಬೈಂದೂರು ತಾಲೂಕಿನ ಗುಡ್ಡೆಯಂಗಡಿ ಆಲೂರು ಶ್ರೀ ಮೂಕಾಂಬಿಕ ಹಳ್ಳಿ ನಿವಾಸಿ, ಅಮಾಸೆಬೈಲು ಸರಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ನಾಗರಾಜ್ ಶೆಟ್ಟಿ ಹಾಗೂ ಪ್ರತಿಮಾ ಶೆಟ್ಟಿ ದಂಪತಿ ಪುತ್ರಿ.