ಉಡುಪಿ: ಬೆಂಗಳೂರಿನ ಎಂ.ಎಸ್. ರಾಮಯ್ಯ ಮೆಡಿಕಲ್ ಕಾಲೇಜಿನಲ್ಲಿ ಭಾನುವಾರ ನಡೆದ 42ನೇ ಅಖಿಲ ಕರ್ನಾಟಕ ಕಣ್ಣಿನ ತಜ್ಞರ ಸಮ್ಮೇಳನದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ವೈದ್ಯಕಿಯ ನಿರ್ದೇಶಕ ಡಾ. ಕೃಷ್ಣಪ್ರಸಾದ್ ಕೂಡ್ಲು ಅವರು ಅಖಿಲ ಕರ್ನಾಟಕ ಕಣ್ಣಿನ ತಜ್ಞರ ಸಂಘದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಮುಖ್ಯ ಅತಿಥಿಯಾಗಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಉಪಸ್ಥಿತರಿದ್ದರು.
ನೇತ್ರ ತಜ್ಞ ಡಾ.ಹೇಮಂತ್ ಮೂರ್ತಿ ಡಾ.ಕೃಷ್ಣಪ್ರಸಾದ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಕೃಷ್ಣ ಪ್ರಸಾದ್ ಅವರು ಅಖಿಲ ಕರ್ನಾಟಕ ಕಣ್ಣಿನ ತಜ್ಞರ ವೈಜ್ಞಾನಿಕ ಸಮಿತಿ ಸಮಿತಿ ಅಧ್ಯಕ್ಷರಾಗಿ ಹಾಗೂ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಅಖಿಲ ಭಾರತ ಕಣ್ಣಿನ ತಜ್ಞರ ಸಂಘದ ಪ್ರಸ್ತುತ ಎಡಿಟರ್ ಪ್ರೋಸಿಡಿಂಗ್ ಹಾಗೂ ರಾಜ್ಯ ಸರ್ಕಾರದ ಯಶಸ್ವಿನಿ ಆರೋಗ್ಯ ಟ್ರಸ್ಟ್ ಟ್ರಸ್ಟಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.