ಜಿಲ್ಲೆ

ಪತ್ರಿಕಾ ವಿತರಕರ ದಿನಾಚರಣೆ

Davangere - Desk - Mahesh Babu E

ಚಿತ್ರದುರ್ಗ: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ, ಜಿಲ್ಲಾ ಕಾರ್ಯನಿರತ ಪತ್ರಿಕಾ ಹಂಚಿಕೆದಾರರ ಹಾಗೂ ವಿತರಕರ ಸಂಘದಿಂದ ಸೆ.29ರ ಮಧ್ಯಾಹ್ನ 12ಕ್ಕೆ ಪತ್ರಿಕಾ ಭವನದಲ್ಲಿ ಪತ್ರಿಕಾ ವಿತರಕರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.

ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಉದ್ಘಾಟಿಸಲಿದ್ದು, ಸಂಘದ ಜಿಲ್ಲಾಧ್ಯಕ್ಷ ಎಸ್.ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಎಂಎಲ್ಸಿ ಕೆ.ಎಸ್.ನವೀನ್, ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಜಿಲ್ಲಾಧಿಕಾರಿ ಜಿಆರ್‌ಜೆ ದಿವ್ಯಾಪ್ರಭು, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂ ರಾವ್, ಕಾರ್ಮಿಕ ನಿರೀಕ್ಷಕ ಡಿ.ರಾಜಣ್ಣ, ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ಶಂಭುಲಿಂಗ ಇತರರು ಪಾಲ್ಗೊಳ್ಳುವರು.