ಜಿಲ್ಲೆ

ನಿವೇಶನ, ಹಕ್ಕುಪತ್ರಕ್ಕೆ ಒತ್ತಾಯಿಸಿ ಶುಕ್ರವಾರ ಪ್ರತಿಭಟನೆ

ಸುನಿಲ್ ಪೊನ್ನೇಟಿ

ಮಡಿಕೇರಿ:

ಜಿಲ್ಲೆಯ ಎಸ್‌ಸಿ, ಎಸ್‌ಟಿ, ಒಬಿಸಿ ಹಾಗೂ ಅಲ್ಪಸಂಖ್ಯಾತ ಕೂಲಿ ಕಾರ್ಮಿಕ ವಸತಿ ರಹಿತರಿಗೆ ನಿವೇಶನ ಮತ್ತು ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ಶುಕ್ರವಾರ (ಏ.25) ಮಡಿಕೇರಿಯಲ್ಲಿ ಆಲ್ ಇಂಡಿಯಾ ಬಹುಜನ ಪಾರ್ಟಿ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ. ಮೊಣ್ಣಪ್ಪ ತಿಳಿಸಿದ್ದಾರೆ.

ಕೊಡಗಿನಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಹಾಗೂ ಅಲ್ಪಸಂಖ್ಯಾತ ಬಡವರು ಕೂಲಿ ಕೆಲಸ ಮಾಡಿಕೊಂಡು ಜೋಪಡಿಯಲ್ಲಿ ವಾಸ ಮಾಡುತ್ತಿದ್ದಾರೆ.

ಜಿಲ್ಲೆಯಾದ್ಯಂತ ಬಡವರ ಸರ್ವೆ ಮಾಡಿ ಸರ್ಕಾರದ ಇವರ ಸೂರಿಗಾಗಿ ಜಮೀನು ಕಾದಿರಿಸಬೇಕಾಗಿದೆ. ಆದರೆ ಅಧಿಕಾರಿಗಳು ಬಲಿಷ್ಠರ ಪ್ರಭಾವಕ್ಕೆ ಒಳಗಾಗಿ ಯಾವುದೇ ಕ್ರಮ ತೆಗೆದುಕೊಳ್ಳದೆ ಬಡವರಿಗೆ ಅನ್ಯಾಯ ಮಾಡುತ್ತಿರುವುದನ್ನು ಖಂಡಿಸಿ ಶುಕ್ರವಾರ ಪ್ರತಿಭಟನೆ ನಡೆಸಲಾಗುತ್ತಿದ್ದು, ಇದಕ್ಕೂ ಮೊದಲು ಸುದರ್ಶನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ತನಕ ಮೆರವಣಿಗೆ ನಡೆಸಲಾಗುವುದು ಎಂದು ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪಕ್ಷದ ಪ್ರಮುಖರಾದ ಮಾರಸಂದ್ರ ಮುನಿಯಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ರಾಷ್ಟಿçÃಯ ಸಂಯೋಜಕ ಗೋಪಿನಾಥ್, ರಾಜ್ಯ ಸಂಯೋಜಕ ಆರ್. ಮುನಿಯಪ್ಪ ಸೇರಿದಂತೆ ಹಲವು ಪ್ರಮುಖರು ಇದರಲ್ಲಿ ಭಾಗವಹಿಸಲಿದ್ದಾರೆ. ಪ್ರಮುಖ 10 ಹಕ್ಕೋತ್ತಾಯಗಳನ್ನು ಈ ಸಂದರ್ಭ ಜಿಲ್ಲಾಡಳಿತದ ಮುಂದೆ ಇಡಲಾಗುವುದು ಎಂದರು.

ಪಕ್ಷದ ಉಪಾಧ್ಯಕ್ಷ ಕಿರಣ್ ಜಗದೀಶ್, ಪದಾಧಿಜಾರಿಗಳಾದ ಸುಜಾತ, ಪಿ.ಐ. ಸಂಜೀವ, ಕೆ.ಎಸ್. ಸೋಮಯ್ಯ, ಪಿ.ಆರ್. ಮಂಜುಳಾ ಸುದ್ದಿಗೋಷ್ಠಿಯಲ್ಲಿ ಇದ್ದರು.