ಜಿಲ್ಲೆ

ಬಂಟ್ವಾಳದಿಂದ 1500 ಕಾರ್ಯಕರ್ತರು : ಚೆನ್ನಪ್ಪ ಕೋಟ್ಯಾನ್ ವಿವರ

ಸೌಮ್ಯ ಆರ್

ಬಂಟ್ವಾಳ: ಹಿಂದು ಹಿತರಕ್ಷಣಾ ಸಮಿತಿಯ ಬೃಹತ್ ಪ್ರತಿಭಟನೆಯಲ್ಲಿ ಬಂಟ್ವಾಳ ಮಂಡಲದಿಂದ 1500ಕ್ಕಿಂತ ಮೇಲ್ಪಟ್ಟು ಕಾರ್ಯಕರ್ತರು ಭಾಗವಹಿಸಲಿದ್ದೇವೆ ಎಂದು ಬಂಟ್ವಾಳ ಮಂಡಲ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್ ತಿಳಿಸಿದರು.

ಬಿ.ಸಿ.ರೋಡಿನ ಪಕ್ಷದ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತಿಭಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಮಂಡಲದ ಎಲ್ಲ್ಲ ಶಕ್ತಿಕೇಂದ್ರದ ವ್ಯಾಪ್ತಿಯಲ್ಲಿ ಪೂರ್ವಭಾವಿ ಸಭೆ ನಡೆಸಲಾಗಿದ್ದು, ಬಂಟ್ವಾಳ ಮಂಡಲದ ಎಲ್ಲ ಮಹಾಶಕ್ತಿ ಕೇಂದ್ರಗಳಲ್ಲಿ ಶಕ್ತಿಕೇಂದ್ರದ ಪ್ರಮುಖರು, ಬೂತ್ ಸಮಿತಿಯ ಅಧ್ಯಕ್ಷರು, ಸದಸ್ಯರು, ಜಿಲ್ಲಾ ಸಮಿತಿಯ ಸದಸ್ಯರು, ಮೋರ್ಚಾಗಳ ಪದಾಧಿಕಾರಿಗಳು, ಸದಸ್ಯರು, ಪ್ರಕೋಷ್ಠದ ಪ್ರಮುಖರು, ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿ ಅವರ ನೇತೃತ್ವದಲ್ಲಿ ಭಾಗವಹಿಸಲಿದ್ದೇವೆ ಎಂದರು.

ಪಕ್ಷದ ಪ್ರಮುಖರಾದ ದಿನೇಶ್ ಅಮ್ಟೂರು, ಶಿವಪ್ರಸಾದ್ ಶೆಟ್ಟಿ, ಸುದರ್ಶನ್ ಬಜ, ಪುರುಷೋತ್ತಮ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.