ಜಿಲ್ಲೆ

ರಾಜ್ಯ ಸರ್ಕಾರದಿಂದ ಓಲೈಕೆ ರಾಜಕಾರಣ -  ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

Mangaluru - Nishantha Narayana

ಪುತ್ತೂರು: ಗ್ಯಾರಂಟಿ ಹೆಸರಿನಲ್ಲಿ ಅಭಿವೃದ್ಧಿಯನ್ನು ಮರೆತು ತುಘಲಕ್ ನೀತಿಯಲ್ಲಿ ಆಡಳಿತ ನಡೆಸುತ್ತಿರುವ ರಾಜ್ಯ ಸರ್ಕಾರ ಒಂದು ವರ್ಗದ ಜನರನ್ನು ಓಲೈಕೆ ಮಾಡುತ್ತಿದೆ. ಬೆಲೆ ಏರಿಕೆ ಮೂಲಕ ಜನಸಾಮಾನ್ಯರ ಜೀವನವನ್ನು ನರಕದರ್ಶಕವನ್ನಾಗಿ ಮಾಡುತ್ತಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು.

ವಿಧಾನಸಭೆ ಮತ್ತು ವಿಧಾನಪರಿಷತ್‌ಗಳಲ್ಲಿ ಹಲವು ಬಾರಿ ಅನುಚಿತ ಘಟನೆಗಳಾಗಿದ್ದು, ಶಾಸಕರನ್ನು ಅಮಾನತುಗೊಳಿಸಿರುವ ಪ್ರಕರಣಗಳಿಲ್ಲ. ರಾಜ್ಯ ಸರ್ಕಾರ ಬಿಜೆಪಿ ಶಾಸಕರನ್ನು ೬ ತಿಂಗಳ ಕಾಲ ಅಮಾನತು ಮಾಡುವ ಮೂಲಕ ದ್ವೇಷ ರಾಜಕಾರಣ ನಡೆಸುತ್ತಿದೆ. ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಆರೋಪ, ಮಾನಸಿಕ ಹಿಂಸೆ ನೀಡುವ ಮುಖಾಂತರ ಆತ್ಮಹತ್ಯೆ ಮಾಡಿಕೊಳ್ಳುವಂತಹ ಸ್ಥಿತಿಯನ್ನು ರಾಜ್ಯ ಸರ್ಕಾರ ನಿರ್ಮಾಣ ಮಾಡುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಂಗಳೂರಿನಲ್ಲಿ ಏ.೯ರಂದು ಜನಾಕ್ರೋಶ ಯಾತ್ರೆ ನಡೆಯಲಿದ್ದು, ಪುತ್ತೂರಿನಿಂದ ೩ ಸಾವಿರ ಮಂದಿ ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದರು.

ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಮಾತನಾಡಿ ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಏ.೮ರಂದು ಬೆಳಗ್ಗೆ ೯ ಗಂಟೆಗೆ ಸಹಕಾರಿ ಸಮಾವೇಶವನ್ನು ನಗರದ ಕೋಟೆಚಾ ಸಭಾಭವನದಲ್ಲಿ ಹಮ್ಮಿಕೊಳ್ಳಾಗಿದೆ. ಸಂಸದರು, ಸಹಕಾರಿ ಧುರೀಣರು ಭಾಗವಹಿಸಲಿದ್ದಾರೆ ಎಂದರು. ಪದಾಽಕಾರಿಗಳಾದ ಪುರುಷೋತ್ತಮ, ವಿರೂಪಾಕ್ಷ ಮಚ್ಚಿಮಲೆ ಉಪಸ್ಥಿತರಿದ್ದರು.