pressmeet 
ಜಿಲ್ಲೆ

ಕೈ ಅಭ್ಯರ್ಥಿಗೆ ಭೋವಿ ವಡ್ಡರ ಸಂಘದ ಬೆಂಬಲ

ಶಿವರಾಜ.ಎಂ

ವಿಜಯವಾಣಿ ಸುದ್ದಿಜಾಲ ನೆಲಮಂಗಲ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ರಾಜ್ಯ ಭೋವಿ ವಡ್ಡರ ಸಂಘ ಬೆಂಬಲ ನೀಡುತ್ತಿದೆ ಎಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಚೌಡಯ್ಯ ತಿಳಿಸಿದರು.
ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ರಾಜ್ಯ ಭೋವಿ ವಡ್ಡರ ಸಂಘದಿಂದ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಪರಿಶಿಷ್ಟ ಜಾತಿ, ಪಂಗಡಗಳ ರಕ್ಷಣೆಗೆ ಕಾಂಗ್ರೆಸ್ ಬದ್ಧವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಸಮಾಜಕ್ಕೆ ರಾಜಕೀಯ ಕ್ಷೇತ್ರದಲ್ಲಿ ಮಹತ್ವದ ಸ್ಥಾನಮಾನ ನೀಡಿದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಭೋವಿ ವಡ್ಡರ ಸಂಘ ಕಾಂಗ್ರೆಸ್‌ೆ ಬೆಂಬಲಿಸುತ್ತಿದೆ ಎಂದರು.
ಗ್ರಾಪಂ ಸದಸ್ಯ ಮಂಜುನಾಥ್ ಮಾತನಾಡಿ, ಸಮುದಾಯದ ಮುಖಂಡರನ್ನು ಸಂಘಟಿಸಿ, ಅತಿಹೆಚ್ಚು ಮತಗಳಿಕೆಗೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಕೆಪಿಸಿಸಿ ಸದಸ್ಯ ನಾಗೇಶ್, ರಾಜ್ಯ ಭೋವಿ ವಡ್ಡರ ಸಂಘದ ಜಂಟಿ ಕಾರ್ಯದರ್ಶಿ ವಿ.ರಾಜಣ್ಣ, ಮುಖಂಡರಾದ ಗೋವರ್ಧನ್, ದೀಪಕ್, ವೆಂಕಟರಮಣಯ್ಯ ಇತರರು ಇದ್ದರು.