ಅರಕಲಗೂಡಿನಲ್ಲಿ ಶನಿವಾರ ಆಯೋಜಿಸಿದ್ದ ತಾಲೂಕು ಮಟ್ಟದ ಸಮಗ್ರ ರೋಗಗಳ ಕಣ್ಗಾವಲು ಸಮಿತಿ ಸಭೆಯಲ್ಲಿ ಪರಿಣಾಮಕಾರಿ ಮಿಷನ್ ಇಂದ್ರಧನುಷ್ ಕಾರ್ಯಕ್ರಮದ ಮಾಹಿತಿಗಳ ಕರಪತ್ರ ಬಿಡುಗಡೆ ಮಾಡಲಾಯಿತು. ಸಿ.ಸ್ವಾಮಿ, ಚಂದ್ರೇಗೌಡ, ಪರಮೇಶ್, ಕವಿತಾ ಇತರರಿದ್ದರು. 
ಜಿಲ್ಲೆ

ಸಾಂಕ್ರಾಮಿಕ ರೋಗ ಹರಡದಂತೆ ನಿಗಾ

ರವಿಕುಮಾರ್ ಪಿ. ಕೆ

ಅರಕಲಗೂಡು: ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆರೋಗ್ಯಾಧಿಕಾರಿ ಕಚೇರಿ ವತಿಯಿಂದ ಶನಿವಾರ ಆಯೋಜಿಸಿದ್ದ ತಾಲೂಕು ಮಟ್ಟದ ಸಮಗ್ರ ರೋಗಗಳ ಕಣ್ಗಾವಲು ಸಮಿತಿ ಸಭೆಯಲ್ಲಿ ಪರಿಣಾಮಕಾರಿ ಮಿಷನ್ ಇಂದ್ರಧನುಷ್ ಕಾರ್ಯಕ್ರಮಕ್ಕೆ ಶಿರಸ್ತೇದಾರ್ ಸಿ.ಸ್ವಾಮಿ ಚಾಲನೆ ನೀಡಿದರು.

ಸಾಂಕ್ರಾಮಿಕ ರೋಗಗಳು ಹರಡದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ನಿಗಾವಹಿಸಬೇಕು. ಲಸಿಕೆಯಿಂದ ವಂಚಿತರಾದ ಮಕ್ಕಳಿಗೆ ಮನೆ ಬಾಗಿಲಿಗೆ ತೆರಳಿ ಚುಚ್ಚು ಮದ್ದು ನೀಡಬೇಕು. ವಿವಿಧ ಇಲಾಖೆ ಅಧಿಕಾರಿಗಳು ಸಾಂಕ್ರಾಮಿಕ ರೋಗಗಳ ಕುರಿತು ಅರಿವು ಪಡೆದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಸಭೆಯಲ್ಲಿ ರಾಷ್ಟ್ರೀಯ ಬಾಲ ಸ್ವಾಸ್ಥೃ ಕಾರ್ಯಕ್ರಮ, ಸಾಂಕ್ರಾಮಿಕ ರೋಗಗಳು ಮತ್ತು ಅಸಾಂಕ್ರಾಮಿಕ ರೋಗಗಳ ಬಗ್ಗೆ ಹಾಗೂ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಅಭಿಯಾನ ಕಾರ್ಯಕ್ರಮದ ಕುರಿತು ಮಾಹಿತಿ ನೀಡಲಾಯಿತು.

ಆರೋಗ್ಯ ನಿರೀಕ್ಷಣಾಧಿಕಾರಿ ಚಂದ್ರೇಗೌಡ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪರಮೇಶ್, ತಾಲೂಕು ಆಶಾ ಕಾರ್ಯಕರ್ತೆಯರ ಮೇಲ್ವಿಚಾರಕಿ ಕವಿತಾ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.