ಕೆ.ಆರ್.ಪೇಟೆ: ಸೊಳ್ಳೆಗಳ ನಿಯಂತ್ರಣದಿಂದ ಮಲೇರಿಯ, ಡೆಂೆ ಹಾಗೂ ಚಿಕೂನ್‌ಗುನ್ಯಾದಂತಹ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದೆಂದು ಗಂಜಿಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿನಯ್ ಹೇಳಿದರು.
ತಾಲೂಕಿನ ಬೂಕನಕೆರೆ ಹೋಬಳಿಯ ಗಂಜಿಗೆರೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಹಮ್ಮಿಕೊಂಡಿದ್ದ ಮಲೇರಿಯಾ ಹಾಗೂ ಡೆಂೆ ವಿರೋಧಿ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪರಿಸರ ಸ್ವಚ್ಛತೆ ಕಾಪಾಡಿಕೊಂಡು ಬರುವುದು ಎಲ್ಲರ ಜವಾಬ್ದಾರಿಯಾಗಿದೆ. ಸ್ವಚ್ಛತೆ ಇಲ್ಲದೆ ಹೋದಲ್ಲಿ ಸೊಳ್ಳೆಗಳ ಉತ್ಪತಿಯಾಗಿ ಮಾರಣಾಂತಿಕ ಕಾಯಿಲೆಗಳು ಹರಡುತ್ತವೆ ಈ ಸಲುವಾಗಿ ಸಾರ್ವಜನಿಕರು ಎಚ್ಚರವಹಿಸಬೇಕು ಎಂದರು.
ಪ್ರಾಥಮಿಕ ಆರೋಗ್ಯ ಸುರಕ್ಷಿತ ಅಧಿಕಾರಿ ರಾಧಾ ಮಾತನಾಡಿ, ತೆಂಗಿನ ಚಿಪ್ಪು, ಪ್ಲಾಸ್ಟಿಕ್ ಡಬ್ಬಿಗಳಲ್ಲಿ ನೀರು ಸಂಗ್ರಹವಾಗುವುದರಿಂದ ಸೊಳ್ಳೆಗಳು ಉತ್ಪತ್ತಿಯಾಗುವ ಮೂಲಕ ರೋಗಗಳು ಹರಡಲು ಕಾರಣವಾಗುತ್ತಿದೆ. ಈ ಬಗ್ಗೆ ಪ್ರತಿಯೊಬ್ಬರೂ ಎಚ್ಚರವಹಿಸಬೇಕೆಂದರು.
ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಪ್ರವೀಣ್, ಹಿರಿಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಸತೀಶ್, ಆಶಾ ಕಾರ್ಯಕತೆರ್ಯರು, ಆರೋಗ್ಯ ಇಲಾಖೆಯ ಸಿಬ್ಬಂದಿ, ನೀರುಗಂಟಿಗಳು ಇತರರು ಇದ್ದರು.