ಕಾರವಾರ: ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಉತ್ತಮ ಸ್ಥಾನಗಳನ್ನು ಪಡೆದುಕೊಳ್ಳುವುದರ ಮೂಲಕ ತಾಲೂಕು, ಜಿಲ್ಲೆಗೆ ಕೀರ್ತಿ ತರಬೇಕು ಎಂದು ಎಂಎಲ್ ಸಿ ಗಣಪತಿ ಉಳ್ವೇಕರ್ ಹಾರೈಸಿದರು.
ಶಾಲಾ ಶಿಕ್ಷಣ ಇಲಾಖೆಯಿಂದ ನಗರದ ಮಾಲಾದೇವಿ ಮೈದಾನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ 14 ವರ್ಷದೊಳಗಿನ ಕಾರವಾರ ತಾಲೂಕ ಮಟ್ಟದ ಪ್ರಾಥಮಿಕ ಶಾಲೆಗಳ ಇಲಾಖೆಯ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಯಶಸ್ವಿಯಾಗಿ ಸಂಪನ್ನಗೊಂಡಿತು
ಈಗ ಕ್ರೀಡೆಗಳಿಗೆ ಮೊದಲಿಗಿಂತ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿದೆ ಎಂದರು. ದೈಹಿಕ ಶಿಕ್ಷಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು .
ಮುಖ್ಯ ಅತಿಥಿಯಾಗಿದ್ದ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ತಾಲೂಕ ಅಧ್ಯಕ್ಷ ಜೈ ರಂಗನಾಥ ಬಿ.ಎಸ್. ಪ್ರಸ್ತುತ ಏಷ್ಯನ್ ಕ್ರೀಡೆಗಳಲ್ಲಿ ಭಾರತವು ಚಿನ್ನದ ಪದಕಗಳ ಗೆಲ್ಲುವತ್ತ ಮುನ್ನುಗ್ಗುತ್ತಿರುವ ಸಂದರ್ಭದಲ್ಲಿ ನಮ್ಮ ತಾಲೂಕಿನ ವಿದ್ಯಾರ್ಥಿಗಳು ಸಹ ಉತ್ತಮ ಕ್ರೀಡಾ ಸಾಧನೆಯನ್ನು ಮಾಡಿ ದೇಶ ಮಟ್ಟದಲ್ಲಿ ಭಾಗವಹಿಸುವಂತಹ ಶಕ್ತಿ ಹಾಗೂ ವಿಶೇಷ ಸಾಮರ್ಥ್ಯ ಗಳ ತಮಗೆ ದೊರೆಯಲೆಂದು ಹಾರೈಸಿದರು.
ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಎಲ್ಲ ವಿದ್ಯಾರ್ಥಿಗಳಿಗೆ ಉತ್ತಮ ಊಟೊಪಚಾರದ ವ್ಯವಸ್ಥೆಯನ್ನು ಮಾಡಿದ ಆ ಮೂಲಕ ತಾಲೂಕಿನ ಎಲ್ಲ ವಿದ್ಯಾರ್ಥಿಗಳ ಕ್ರೀಡಾ ಸ್ಪೂರ್ತಿಗೆ ಪ್ರೋತ್ಸಾಹ ನೀಡಿದ ಗಣಪತಿ ಉಳೇಕರ್ ಅವರಿಗೆ ಅಭಿನಂದನೆ ಸಲ್ಲಿಸಿದರು.
ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಹಾಸ ರಾಯ್ಕರ್ ಪ್ರಸ್ತಾವಿಕವಾಗಿ ಮಾತನಾಡಿದರು. ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಶ್ರೀ ಪ್ರಕಾಶ್ ನಾಯಕ, ಪ್ರಾಥಮಿಕಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಆರ್.ಪಿ. ಗೌಡ, ಶಿಕ್ಷಣ ಸಂಯೋಜಕ ಪ್ರಕಾಶ ಚೌಹಾಣ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುಧಾಕರ್ ಗುನಿಗಿ, ನಗರಸಭೆ ಸ್ಥಳೀಯ ಸದಸ್ಯ ಪ್ರೇಮಾನಂದ ಆರ್. ಗುನಗಾ ಉಪಸ್ಥಿತರಿದ್ದರು.
ಕ್ರೀಡಾಕೂಟಕ್ಕೆ ಧನ ಸಹಾಯ ಮಾಡಿದ ಕೆಡಿಸಿಸಿ ಬ್ಯಾಂಕ್ ನ ನಿರ್ದೇಶಕರಾದ ಪ್ರಕಾಶ್ ಗುನಿಗಿ ಹಾಗೂ ಸೇಂಟ್ ಮಿಲಾಗ್ರಿಸ್ ಬ್ಯಾಂಕ್ ನ ಸಂಸ್ಥಾಪಕ ಜಾರ್ಜ್ ಫರ್ನಾಂಡಿಸ್ ಅವರಿಗೆ ಸಿಆರ್ ಪಿ ಚವಾಣ್ ರವರು ವಂದಿಸಿದರು.