ಜಿಲ್ಲೆ

ಮೂಲ ಸೌಕರ್ಯಗಳಿಗೆ ಆದ್ಯತೆ

ಪ್ರಸಿನ್ ಕೆ.ಆರ್

ರಾಮಂದೂರು: ಗ್ರಾಮಗಳ ಮೂಲ ಸೌಕರ್ಯಗಳಿಗೆ ಹಚ್ಚಿನ ಆದ್ಯತೆ ನೀಡಲಾಗುವುದು ಎಂದು ಸಚಿವ ಕೆ ವೆಂಕಟೇಶ್ ಹೇಳಿದರು.
ಪಿರಿಯಾಪಟ್ಟಣ ತಾಲೂಕು ಅರೇನಹಳ್ಳಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಗ್ರಾಮಗಳಲ್ಲಿ ಅಗತ್ಯವಿರುವ ಕಾಮಗಾರಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತಿದ್ದು, ಹಂತ-ಹಂತವಾಗಿ ಅನುದಾನ ಕಲ್ಪಿಸಲಾಗುವುದು ಎಂದು ಹೇಳಿದರು.

ಅರೇನಹಳ್ಳಿ, ಮಾಕನಹಳ್ಳಿ, ಬೋರೆಹೊಸಹಳ್ಳಿ, ತಾತನಹಳ್ಳಿ, ಹರಿಲಾಪುರ, ಸತ್ಯವಾದ, ಏಕಾವಲು ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಗ್ರಾಪಂ ಅಧ್ಯಕ್ಷೆ ಅನಿತಾ, ತಹಸೀಲ್ದಾರ್ ಕುಂಞ ಅಹಮದ್, ಇ.ಒ. ಸುನೀಲ್, ಇಂಜಿನಿಯರ್ ವಿಜಯ್, ಡಿ.ಟಿ. ಸ್ವಾಮಿ, ಸೋಮಯ್ಯ ಮಹೇಂದರ್, ಕೃಷ್ಣಮೂರ್ತಿ, ಚಂದ್ರಶೇಖರ್, ಮಲ್ಲಿಕಾರ್ಜುನ್, ಸೋಮಶೇಖರ್ ಇತರರು ಇದ್ದರು.