ಹೊಸನಗರ: ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾವಂತ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿದ್ದು, ಉತ್ತಮ ಶಿಕ್ಷಣ ಅನುಷ್ಠಾನಗೊಳ್ಳುತ್ತಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ಪಟ್ಟಣದ ಆರ್ಯ ಈಡಿಗರ ಭವನದಲ್ಲಿ ಏರ್ಪಡಿಸಿದ್ದ ಸರ್ವಪಲ್ಲಿ ಡಾ.ರಾಧಾಕೃಷ್ಣನ್ ಅವರ 135ನೇ ಜನ್ಮದಿನಾಚರಣೆ ಮತ್ತು ಶಿಕ್ಷಕರ ದಿನಾಚರಣೆ ಉದ್ಘಾಟಿಸಿದ ಅವರು, ಗ್ರಾಮೀಣ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುವುದಾಗಿ ಭರವಸೆ ನೀಡಿದರು.
ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ವಿದ್ಯಾರ್ಥಿಗಳನ್ನು ದೇಶದ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಹೊಣೆಗಾರಿಕೆ ಹೊಂದಿರುವ ಶಿಕ್ಷಕರ ಸೇವೆ ಮಹತ್ವದ್ದಾಗಿದೆ ಎಂದರು.
ತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಪ್ರೌಢಶಾಲಾ, ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ ಪಡೆದ ಶಾಲೆಗಳು, ಉತ್ತಮ ಅಂಕ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ನಿಧನರಾದ ಶಿಕ್ಷಕರ ಕುಟುಂಬಗಳಿಗೆ ಸ್ಮರಣಿಕೆ ನೀಡಲಾಯಿತು. ಉಪನ್ಯಾಸಕ ಡಾ. ಸರ್ಫ್ರಾಜ್ ಚಂದ್ರಗುತ್ತಿ ಉಪನ್ಯಾಸ ನೀಡಿದರು.
ತಾಪಂ ಇಒ ನರೇಂದ್ರಕುಮಾರ್, ಪಪಂ ಮುಖ್ಯಾಧಿಕಾರಿ ಬಾಲಚಂದ್ರಪ್ಪ, ಬಿಇಒ ಕೃಷ್ಣಮೂರ್ತಿ, ದೈಹಿಕ ಶಿಕ್ಷಣ ಪರಿವೀಕ್ಷಕ ಬಾಲಚಂದ್ರರಾವ್, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಎಂ.ರಂಗನಾಥ್, ಎಸ್.ಪಿ.ನಾಗರಾಜ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವಣ್ಣಪ್ಪ, ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ವಿ.ರಂಗಸ್ವಾಮಿ, ಸಹಶಿಕ್ಷಕರ ಸಂಘದ ಅಧ್ಯಕ್ಷ ರೇಣುಕೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಆರ್.ಸುರೇಶ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಆರ್.ರಮೇಶ್, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಆರ್.ಕುಬೇಂದ್ರಪ್ಪ, ಬಿ.ಎಂ.ರಾಜುಶೆಟ್ಟಿ ಇತರರಿದ್ದರು.